

ಚನ್ನಪಟ್ಟಣ
ತಾಲೂಕಿನ ತಿಟ್ಟಮಾರನಹಳ್ಳಿ ಬಳಿ ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ನಡೆದಿದ್ದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾಳೆ.
ಕೇರಳ ಮೂಲದ ಜೆ.ಆದಿಲಾ (23) ಮೃತೆ. ಗುರುವಾರ ಮುಂಜಾನೆ ಬೆಂಗಳೂರಿನಿಂದ ಕೇರಳದ ಕ್ಯಾಲಿಕಟ್ಗೆ ತೆರಳುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು.
ಅಪಘಾತದ ರಭಸಕ್ಕೆ ಆದಿಲಾ ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯವಾಗಿತ್ತು. ಗಾಯಾಳು ಆದಿಲಾ ಅವರನ್ನು ಬೆಂಗಳೂರಿನ ಸಾಯಿಕೃಪಾ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.