ಜ್ಯೂಸ್ ಎಂದು ಕ್ರಿಮಿನಾಶಕ ಕುಡಿದ ಮಗು ಸಾವು

IMG_20230904_144533.jpg
Published on

ಚನ್ನಪಟ್ಟಣ

ಮನೆಯಲ್ಲಿದ್ದ ಕೀಟನಾಶಕ (ದ್ರಾವಕ) ವನ್ನು ಜ್ಯೂಸ್ ಎಂದು ಕುಡಿದು ಪುಟ್ಟ ಕಂದಮ್ಮವೊಂದು ಮೃತಪಟ್ಟಿರುವ ಘಟನೆ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಯಶ್ವಿಕ್ (2) ಮೃತ ಕಂದಮ್ಮ. ಗ್ರಾಮದ ಪುಷ್ಪ ಹಾಗೂ ಹನುಮಂತ ಎಂಬ ದಂಪತಿಗಳ ಏಕೈಕ ಪುತ್ರನಾದ ಯಶ್ವಿಕ್, ತನ್ನ ಮನೆಯಲ್ಲಿದ್ದ ಕೀಟನಾಶಕವನ್ನು ಜ್ಯೂಸ್ ಎಂದು ತಿಳಿದು ಸೇವಿಸಿ ಈ ಘಟನೆ ನಡೆದಿದೆ. ಮೃತ ಕಂದಮ್ಮನ ತಂದೆ, ತನ್ನ ಬೆಳೆಗೆ ಕೀಟನಾಶಕವನ್ನು ಸಿಂಪಡಿಸಲು ದ್ರಾವಕವನ್ನು ತಂದಿದ್ದು, ಬಾಕಿ ಉಳಿದಿದ್ದ ಔಷಧಿಯನ್ನು ಬಾಟಲಿಯೊಂದಕ್ಕೆ ಹಾಕಿ ಇಟ್ಟಿದ್ದರು. ಈ ಬಾಟಲಿಯಲ್ಲಿ ಇರುವುದು ಜ್ಯೂಸ್ ಎಂದು ಭಾವಿಸಿದ ಈ ಪುಟಾಣಿ ಕುಡಿದಿದೆ. ಕುಡಿದ ತಕ್ಷಣ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ.

ಪುಟ್ಟಕಂದಮ್ಮನನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲುಮುಟ್ಟಿದೆ. ಇನ್ನೊಂದೆಡೆ ಈ ಘಟನೆ ಚಿಕ್ಕಮಕ್ಕಳಿರುವ ಪಾಲಕರಿಗೆ ಜಾಗರೂಕತೆಯಿಂದ ಇರಬೇಕು ಎಂಬುದನ್ನು ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net