ಅಂಕನಹಳ್ಳಿಯಲ್ಲಿ ಸೆರೆ ಸಿಕ್ಕ ಚಿರತೆ

Sasvehalli, Srinidhi Estate, Cheetah,
Published on

ರಾಮನಗರ: ಕಳೆದ ಕೆಲವು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಸಿದ್ದ ಚಿರತೆಯೊಂದು ಬೋನಿಗೆ ಬಿದ್ದಿದೆ.

ತಾಲೂಕಿನ ಕೈಲಾಂಚ‌ ಹೋಬಳಿ ಅಂಕನಹಳ್ಳಿ ಗ್ರಾಮದಲ್ಲಿ ಬೋನಿಗೆ ಬಿದ್ದ ಗಂಡು ಚಿರತೆ. ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದಲೂ ಚಿರತೆ ಹಾವಳಿ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆಗಾಗಿ ಬೋನು ಇಟ್ಟಿತ್ತು.


ಶನಿವಾರ ಮುಂಜಾನೆ ಜಯಲಕ್ಷ್ಮಮ್ಮ ಎಂಬುವರ ಜಮೀನಿನಲ್ಲಿ ಚಿರತೆ ಬೋನಿಗೆ ಬಿದ್ದಿದ್ದು, ಅರಣ್ಯ ಇಲಾಖೆ ಸೆರೆ ಸಿಕ್ಕ ಚಿರತೆಯನ್ನು ಸುರಕ್ಷಿತ ತಾಣಕ್ಕೆ ರವಾನೆ ಮಾಡಲು ಕಾರ್ಯಮಗ್ನವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net