ಜೆಡಿಎಸ್ ನೊಂದಿಗೆ ಮೈತ್ರಿ ಬೇಕಿದೆ ಮಾಜಿ ಸಚಿವ ಯೋಗೇಶ್ವರ್ ಹೇಳಿಕೆ

hdk shivakumar yogeshwar
Published on

ರಾಮನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕಾದರೆ ಜೆಡಿಎಸ್ ನೊಂದಿಗೆ ಮೈತ್ರಿ ಅಗತ್ಯವಿದೆ ಎಂದು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಪ್ರತಿಪಾದಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ರಾಜ್ಯದಲ್ಲಿ ಜೆಡಿಎಸ್ ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡರೆ 25 ಸ್ಥಾನಗಳನ್ನು ಗೆಲ್ಲಬಹುದು ಎನ್ನುವುದು ನನ್ನ ವಯುಕ್ತಿಕ ಅಭಿಪ್ರಾಯ ಎಂದರು. ಆದರೆ ಇದರ ಬಗ್ಗೆ ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದರು. ಅಲ್ಲದೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲೀಸಲು, ನಮ್ಮ ಪಕ್ಷದ ಯಾರೇ ಅಭ್ಯರ್ಥಿ ಆದರೂ ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದು ಹೇಳಿದರು.

ಅವರಿಬ್ಬರು ವ್ಯಾಪಾರ ಸ್ನೇಹಿತರು: ತಮಿಳು ನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ರಾಜ್ಯದ ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರೂ ಸ್ನೇಹಿತರು. ಇಂಡಿಯಾ ಮೈತ್ರಿ ಕೂಟದ ಅಂಗ ಪಕ್ಷದವರು ಕೂಡಾ. ಇಬ್ಬರ ನಡುವೆ ವ್ಯಾಪಾರ ಸಂಬಂಧ ಇದೆ. ಆದ್ದರಿಂದ ಡಿ.ಕೆ.ಶಿವಕುಮಾರ್ ಇಲ್ಲಿ ಡ್ರಾಮಾ ಮಾಡುತ್ತಿದ್ದಾರೆ. ಇವರಿಂದ ಜಿಲ್ಲೆ ಮತ್ತು ರಾಜ್ಯದ ಅಭಿವೃದ್ಧಿ ನಿರೀಕ್ಷಿಲು ಸಾಧ್ಯವೇ, ರಾಜ್ಯದ ಕಾಳಜಿ ಇದ್ದಿದ್ದರೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರಲಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net