40% ಕಮೀಷನ್ ಆರೋಪಕ್ಕೆ ಸಾಕ್ಷ್ಯ ಇಟ್ಟಿದ್ರಾ? ಕಾಂಗ್ರೆಸ್ ಗೆ ಎಚ್ಡಿಕೆ ಪ್ರಶ್ನೆ

HD Kumaraswamy
Published on

ರಾಮನಗರ: ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಸರ್ಕಾರ ಯಾವ ಸಾಕ್ಷ್ಯ ಇಟ್ಟಿತ್ತು ಎಂದು ಕೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ ತಿರುಗೇಟು ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕಾಂಗ್ರೆಸ್ ವಿರುದ್ಧ 640ಕೋಟಿ ಭ್ರಷ್ಟಾಚಾರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ

ಲೋಕಾಯುಕ್ತಕ್ಕೆ ದೂರು ನೀಡಲಿ ಎಂದ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹಾಗಾದ್ರೆ ಅವರು ಏಕೆ ಬಿಜೆಪಿ ಸರ್ಕಾರದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಿಲ್ಲ ಎಂದು ಪ್ರಶ್ನಿಸಿದರು.

ನೀವು ಬಿಜೆಪಿ ವಿರುದ್ಧ 40% ಅಂತ ಡಂಗೂರ ಹೊಡೆದ್ರಲ್ಲ, ಯಾವ ಸಾಕ್ಷಿ ಇಟ್ಟಿದ್ರಿ.? ಅವನ್ಯಾರೋ ಗುತ್ತಿಗೆದಾರ ದೂರು ಕೊಟ್ರಲ್ಲ, ಅವರು ಸಾಕ್ಷಿ ಇಟ್ಟಿದ್ರಾ.? ಈಗ ಅಧಿಕಾರದಲ್ಲಿದ್ದೀರಲ್ಲಾ ಅದರ ಬಗ್ಗೆ ತನಿಖೆ ಮಾಡಿಸಿ ಎಂದು ಸವಾಲು ಎಸೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net