

ಬಿಡದಿ (ರಾಮನಗರ): ಅಮಿತ್ ಶಾಗೆ ಯಾವ ನೈತಿಕತೆ ಇದೆ: ರಾಜ್ಯದಲ್ಲಿ ಒಂದು ಕಡೆ ಬಿಜೆಪಿಯ ಲಂಚಾವತಾರ ಹೆಚ್ಚಿದೆ ಇನ್ನೊಂದು ಕಡೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಯಾವ ನೈತಿಕತೆ ಇಟ್ಟುಕೊಂಡು ರಾಜ್ಯದಲ್ಲಿ ಭಾಷಣ ಮಾಡುತ್ತಿದ್ದಾರೆ ಎಂದು ಎಚ್.ಡಿ.ಕೆ ಕುಟುಕಿದರು.
ಬಿಡದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಅರಿವಿದ್ದಿದ್ದರೆ ಅವರು ಇಲ್ಲಿಗೆ ಬರುವ ಹಾಗೆ ಇರಲಿಲ್ಲ. ಯಾವ ಮುಖ ಇಟ್ಟುಕೊಂಡು ಬಂದು ಭಾಷಣ ಮಾಡುತಿದ್ದಾರೆ. ಸಾರ್ವಜನಿಕವಾಗಿ
ನಾಡಿನ ಜನರ ಹಣವನ್ನ ಲೂಟಿ ಹೊಡೆದು ಹೇಗೆ ರಾಜ್ಯದ ಅಭಿವೃದ್ಧಿ ಮಾಡುತ್ತಾರೆ ಎಂದು ಲೇವಡಿ ಮಾಡಿದರು.
ಡಬಲ್ ಇಂಜಿನ್ ಸರ್ಕಾರ ಕೊಟ್ಟೆ ರಾಜ್ಯವನ್ನ ಲೂಟಿ ಮಾಡುತ್ತಿರುವುದನ್ನ ರಾಜ್ಯದ ಜನ ಕಣ್ಣಾರೆ ನೋಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಕೂಡ ಇದರ ಹೊರೆತಾಗಿಲ್ಲ ಎರಡು ರಾಷ್ಟ್ರೀಯ ಪಕ್ಷಗಳು ಹೈಕಮಾಂಡ್ ಸಂಸ್ಕೃತಿ ಇಟ್ಟುಕೊಂಡು ಬಂದಿವೆ. ಕಾಂಗ್ರೆಸ್ ನವರು ಸಹ ರೀಡೂ ಹಗರಣದಲ್ಲಿ ಎಷ್ಟು ಲೂಟಿ ಮಾಡಿದ್ದಾರೆ ಎಂಬ ಸತ್ಯ ಗುಟ್ಟಾಗಿ ಉಳಿದಿಲ್ಲ. ಸತ್ಯಹರಿಶ್ಚಂದ್ರ ಅಂತ ಮಾತನಾಡುತ್ತರಲ್ಲ ಸಿದ್ದರಾಮಯ್ಯ ಅವರು ಅವರ ಕಾಲದಲ್ಲಿ ಎಷ್ಟು ಹಗರಣ ನಡೆದಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಸಿದ್ದರಾಮಯ್ಯ ವಿರುದ್ಧ ಗುಡುಗಿದರು.