ವ್ಯಕ್ತಿತ್ವ ವಿಕಸಕ್ಕೆ ಕ್ರೀಡೆ ಸಹಕಾರಿ

24 KKP 1 (1)
Published on

ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಮಂಜುನಾಥ್​ ಅಭಿಪ್ರಾಯಸರ್ಕಾರಿ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಕನಕಪುರ
ಕ್ರೀಡಾಭಿಮಾನ ಹೆಚ್ಚಿಸಲು ಹಾಗೂ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಸಹಕಾರಿಯಾಗಿದೆ ಎಂದು ಜಿಲ್ಲಾ ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಮಂಜುನಾಥ್​ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ದೈಹಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2023ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಕಾಲೇಜಿನಲ್ಲಿ ಇಂತಹ ಕ್ರೀಡಾಕೂಟ ಆಯೋಜನೆ ಮಾಡಿರುವುದು ಪ್ರಾಂಶುಪಾಲರು ಮತ್ತು ಶಿಕ್ಷಕರ ಕ್ರಿಯಾಶೀಲತೆ ಕಾರಣವಾಗಿದೆ. ಪರಸ್ಪರ ಬಾಂಧವ್ಯ ವೃದ್ಧಿಗೆ ಕ್ರೀಡಾಕೂಟಗಳು ಸಹಕಾರಿಯಾಗಿವೆ. ಇತ್ತೀಚಿನ ದಿನಗಳಲ್ಲಿ ಕ್ರೀಡಾಕೂಟಗಳಲ್ಲಿ ಪ್ರೋತ್ಸಾಹದ ಕೊರತೆ ಕಾಣುತ್ತಿದೆ. 

ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ಕ್ರೀಡೆಯಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂಬ ಚಿಂತನೆ ಇದ್ದರೂ ವಿದ್ಯಾರ್ಥಿಗಳ ಗಮನ ಅನ್ಯ ವಿಷಯಗಳತ್ತ ಸಾಗುತ್ತಿರುವುದು ವಿಷಾದನೀಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಬಿ.ಶ್ಯಾಮಲಾ ಮಾತನಾಡಿ, ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆ ಜತೆಯಲ್ಲಿ ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ದೈಹಿಕವಾಗಿ, ಮಾನಸಿಕವಾಗಿ ಸಧೃಡರಾಗಲು ಅನುಕೂಲವಾಗುತ್ತದೆ. ನಿರಂತರ ಶ್ರಮ ಮತ್ತು ಶ್ರದ್ಧೆ ಇದ್ದರೆ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಿಂದ ವಂಚಿತರಾಗಬಾರದೆಂಬ ಹಿನ್ನೆಲೆಯಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಕಲಿಕೆಯ ಜತೆ ಕ್ರೀಡೆಯಲ್ಲೂ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.

ಹಾರೋಹಳ್ಳಿ ಪ್ರಥಮದರ್ಜೆ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕಿ ಎಸ್​. ಶೋಭಾ, ಕನಕಪುರ ದೈಹಿಕ ಶಿಕ್ಷಣ ನಿರ್ದೇಶಕ ಡಾ. ವೆಂಕಟಾಚಲಪತಿ, ಸಂಯೋಜಕ ಅಕ್ಷತ ಪರಂಜ್ಯೋತಿ ಕುಮಾರ ಸೇರಿ ಉಪನ್ಯಾಸಕರು, ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net