

ಕನಕಪುರ: ವಿದ್ಯಾರ್ಥಿಗಳಿಗೆ ಕ್ರೀಡಾಕೂಟಗಳು ಉಪಯುಕ್ತವಾಗಿದೆ ಎಂದು ಪ್ರಾಂಶುಪಾಲೆ ಡಾ. ಬಿ. ಶ್ಯಾಮಲ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದಿಂದ ಮಂಗಳವಾರ ಹಮ್ಮಿಕೊಂಡಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ಮಾತನಾಡಿ,
ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತರಲು ಇಂತಹ ವೇದಿಕೆಗಳನ್ನು ಬಳಸಿಕೊಳ್ಳಬೇಕಿದೆ. ಆ ಮೂಲಕ ರಾಜ್ಯ, ಅಂತರ ರಾಜ್ಯ, ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಕೀರ್ತಿ ಗಳಿಸಬೇಕು ಎಂದರು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಿದರು.
ಉಪನ್ಯಾಸಕ ಜಿ.ವಿಶ್ವಾರಾಧ್ಯ, ಸಂಚಾಲಕಿ ಪರಂಜ್ಯೋತಿ ಕುಮಾರ್, ಗ್ರಂಥಪಾಲಕಿ ಮುಕ್ತಾಯಿ ಬಿ. ಹಳೇಜೋಳದ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.