ಟಪಾಲು ವಿಭಾಗದಲ್ಲಿ ಸಿಬ್ಬಂದಿ ಕೊರತೆ ಕನಕಪುರ ತಹಸೀಲ್ದಾರ್‌ಗೆ ಮನವಿ

Published on

ಕನಕಪುರ: ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸುವ ಟಪಾಲು ವಿಭಾಗದಲ್ಲಿ ಯಾರೂ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣಾ ಪಡೆ ಕಾರ್ಯಕರ್ತರು ತಾಲೂಕು ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಸಂಘಟನೆಯ ಜಿಲ್ಲಾ ಉಸ್ತುವಾರಿ ನಟರಾಜು ಮಾತನಾಡಿ, ಅರ್ಜಿ ಸ್ವೀಕರಿಸಲು ಯಾರೂ ಇಲ್ಲದೆ ರೈತರು, ಸಾರ್ವಜನಿಕರು ಪರದಾಡುವಂತಾಗಿದೆ. ತಾಲೂಕು ಕಚೇರಿಯಲ್ಲಿ ಸಣ್ಣ-ಪುಟ್ಟ ಕೆಲಸಗಳಿಗೂ ಜನರು ಕಿರಿಕಿರಿ ಅನುಭವಿಸುವಂತಾಗಿದೆ. ಕೆಲವು ವಿಭಾಗಗಳಲ್ಲಿ ಲಂಚ ಕೊಟ್ಟರೂ ಕೆಲಸ ಆಗುತ್ತಿಲ್ಲ.

ಕೂಡಲೇ ವ್ಯವಸ್ಥೆಯನ್ನು ಸರಿಪಡಿಸುವಂತೆ ತಹಸೀಲ್ದಾರ್ ಡಾ. ಸ್ಮಿತಾ ರಾಮು ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು. ತಹಸೀಲ್ದಾರ್ ಪರವಾಗಿ ಗ್ರೇಡ್-2 ತಹಸೀಲ್ದಾರ್ ಶಿವಕುಮಾರ್ ಮನವಿ ಸ್ವೀಕರಿಸಿದರು. ಪುಟ್ಟಸ್ವಾಮಿ, ಶಿವು, ಸ್ವಾಮಿ, ಮಧು, ಜೀವನ್, ಶ್ರೀನಿವಾಸ್ ಮುಂತಾದವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net