

ಕನಕಪುರ: ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಬುಧವಾರ ನಡೆದ 4ನೇ ಸಾಲಿನ ಆರ್.ಎನ್ ಯೋಗ ಚಾಂಪಿಯನ್‌ಷಿಪ್‌ನಲ್ಲಿ ನಗರದ ನಗರದ ಜೆಟ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳು ಹಲವು ಪದಕಗಳನ್ನು ಗೆದ್ದಿದ್ದಾರೆ.
ಯೋಗ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದ ಶಾಲೆಯ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ತರಗಳಲ್ಲಿ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಯಿತು. ಗೆದ್ದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಶಾಲೆ ಅಧ್ಯಕ್ಷ ಕಿರಣ್‌ರಾಜ್, ಪ್ರತಿಯೊಬ್ಬರೂ ನಿತ್ಯಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ.
ಯೋಗದಿಂದ ರೋಗಮುಕ್ತರಾಗುವುದರ ಜತೆಗೆ ದೇಹದ ಸೌಂದರ್ಯವನ್ನು ಹೆಚ್ಚಿಸುತ್ತದೆ. ವಿಶೇಷವಾಗಿ ವಿದ್ಯಾರ್ಥಿಗಳಿಗೆ ನೆನಪಿನ ಶಕ್ತಿಯನ್ನು ಉತ್ತಮಪಡಿಸುತ್ತದೆ. ನಮ್ಮ ದೇಶದಲ್ಲಿ ಹುಟ್ಟಿದ ಯೋಗವನ್ನು ಇಂದು ಇಡೀ ವಿಶ್ವವೇ ಒಪ್ಪಿಕೊಂಡು ಮಾನ್ಯತೆ ನೀಡಿದೆ. ಯೋಗಾಭ್ಯಾಸದಿಂದ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದರು. ಯೋಗ ಶಿಕ್ಷಕರಾದ ಮಂಜುನಾಥ್, ಮನು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.