

ಚನ್ನಪಟ್ಟಣ
ಪರಿಸರ ರಕ್ಷಣೆಗಾಗಿ ಘನ ಮತ್ತು ದ್ರವ ತ್ಯಾಜ್ಯಗಳ ಸಮರ್ಪಕ ನಿರ್ವಹಣೆ ಅತಿ ಮುಖ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಜವರೇಗೌಡ ಅಭಿಪ್ರಾಯಪಟ್ಟರು.
ತಾಲೂಕಿನ ಕೆಂಗಲ್ ಆಂಜನೇಯಸ್ವಾಮಿ ದೇವಾಲಯದಲ್ಲಿ ಹಿಂದು ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ದೇವಾಲಯಗಳ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗೆ ಹಮ್ಮಿಕೊಂಡಿರುವ ಎರಡು ದಿನಗಳ ನ ಮತ್ತು ದ್ರವತ್ಯಾಜ್ಯ ನಿರ್ವಹಣಾ ಯೋಜನೆ ತರಬೇತಿ ಕಾರ್ಯಾಗಾರಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು.
ದೇವಾಲಯಗಳು ಪವಿತ್ರ ತಾಣಗಳಾಗಿದ್ದು, ಅವುಗಳ ಸ್ವಚ್ಛತೆ ಹಾಗೂ ಕಸಮುಕ್ತ ನಿರ್ವಹಣೆ ಅತಿ ಅವಶ್ಯಕವಾಗಿದೆ. ಸಾವಿರಾರು ಮಂದಿ ಬಂದು ಹೋಗುವ ದೇವಾಲಯಗಳಲ್ಲಿ ಸಮರ್ಪಕವಾಗಿ ತ್ಯಾಜ್ಯ ನಿರ್ವಹಣೆ ವಾಡಬೇಕು. ಈ ದೆಸೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ನಡೆಯುತ್ತಿರುವ ಈ ಕಾರ್ಯಾಗಾರ ಪೂರಕವಾಗಿದೆ ಎಂದರು.
ಮುಜರಾಯಿ ಇಲಾಖೆಯ ಕೇಂದ್ರ ಸ್ಥಾನಿಕ ಸಹಾಯಕ ಯತಿರಾಜು ವಾತನಾಡಿ, ಇಲಾಖೆಯ ಎ ಗ್ರೇಡ್ ದೇವಾಲಯಗಳಿಗೆ ಪ್ರತಿನಿತ್ಯ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಹಾಗಾಗಿ ಸಹಜವಾಗಿಯೇ ದೊಡ್ಡಮಟ್ಟದಲ್ಲಿ ತ್ಯಾಜ್ಯ ಉತ್ಪಾದನೆಯಾಗುತ್ತದೆ. ಈ ತ್ಯಾಜ್ಯವನ್ನು ನ ಹಾಗೂ ದ್ರವ ತ್ಯಾಜ್ಯವನ್ನಾಗಿ ವಿಂಗಡಿಸಿದರೆ ವಿಲೇವಾರಿಗೆ ಅನುಕೂಲವಾಗುತ್ತದೆ. ದೇವಾಲಯಗಳ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ತಿಳಿಸಿದರು.
ಕಾರ್ಯಾಗಾರದ ಮೊದಲ ದಿನವಾದ ಗುರುವಾರ ನ ಹಾಗೂ ದ್ರವ ತ್ಯಾಜ್ಯ ವಿಲೇವಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ದೃಶ್ಯಗಳ ಮೂಲಕ ವಿವರಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳು ವಿಶೇಷ ಉಪನ್ಯಾಸ ನೀಡಿದರು. ಜಿಲ್ಲೆ ಹಾಗೂ ಅಕ್ಕಪಕ್ಕದ ಜಿಲ್ಲೆಗಳ ಸುವಾರು ಹತ್ತಕ್ಕೂ ಹೆಚ್ಚು ಎ ಗ್ರೇಡ್ ದೇವಾಲಯಗಳ ಕಾರ್ಯ ನಿರ್ವಾಹಣಾಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ತಹಸೀಲ್ದಾರ್ ಬಿ.ಕೆ.ಸುದರ್ಶನ್, ಕೆಂಗಲ್ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವಿ.ಬಿ.ಚಂದ್ರಯ್ಯ ಮುಂತಾದವರು ಭಾಗವಹಿಸಿದ್ದರು.