6 ತಿಂಗಳಲ್ಲಿ 9.84 ಲಕ್ಷ ರೂ. ದಂಡ ವಸೂಲಿ

24 RMN-MGD P3
Published on

ಮಾಗಡಿ: ಆರು ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಸಂಚಾರ ನಿಯಮ ಉಲ್ಲಂಘಿಸಿದವರಿಂದ 9.84 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಕುದೂರು ಪೊಲೀಸ್ ಇನ್‌ಸ್ಪೆಕ್ಟರ್ ಎ.ಪಿ.ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ 6 ತಿಂಗಳ ಅವಧಿಯಲ್ಲಿ 35 ಅಪಘಾತ ಪ್ರಕರಣಗಳಲ್ಲಿ 24 ಮಂದಿ ಮೃತಪಟ್ಟಿದ್ದು, 57 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಹೆದ್ದಾರಿಯಲ್ಲಿ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವವರ ವಿರುದ್ಧ ದೂರು ದಾಖಲಿಸಿ ಡ್ರೈವಿಂಗ್ ಲೈಸನ್ಸ್ ರದ್ದು ಮಾಡುವಂತೆ ಆರ್‌ಟಿಒ ಅಧಿಕಾರಿಗಳಿಗೆ ಶಿಾರಸು ಮಾಡಲಾಗಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net