

ರಾಮನಗರ: ಪ್ರಸಿದ್ಧವಾದ ಚಾಮುಂಡೇಶ್ವರಿ ಕರಗ ಮೋಹತ್ಸವ ಹಿನ್ನೆಲೆಯಲ್ಲಿ ರಾಮನಗರ ನಗರಸಭೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕರಗ ಮಹೋತ್ಸವವನ್ನು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೇ ಇರಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆದೇದ ಮೇರೆಗೆ ಜು.4 ಮಂಗಳವಾರ ಬೆಳಿಗ್ಗೆ 6ರಿಂದ ಜು.7ರ ಮಧ್ಯರಾತ್ರಿ 12ರವರೆಗೂ ರಾಮನಗರ ನಗರಸಭೆ ವ್ಯಾಪ್ತಿಯಲ್ಲಿ ಮದ್ಯ ಮಾರಟ ನಿಷೇಧ ಹಾಗೂ ಎಲ್ಲಾ ಮದ್ಯ ಮಾರಾಟ ಅಂಗಡಿಗಳನ್ನು ಮುಚ್ಚಿಸಲು ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಆದೇಶ ಹೊರಡಿಸಿದ್ದಾರೆ.