ವಾಹನ ಡಿಕ್ಕಿ ಹೊಡೆದು ಪಾದಚಾರಿ ಸಾವು

Accident (16)
Published on

ಮಾಗಡಿ: ವಾಹನ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಿರುವುದು ಪಟ್ಟಣದ ಜೀವಪಾಳ್ಯದ ಬಳಿ  ನಡೆದಿದೆ. ತಾಲೂಕಿನ ಅಣ್ಣೆಕೆಂಪಯ್ಯನದೊಡ್ಡಿ ಗ್ರಾಮದ ನಿವಾಸಿ ಬೊಮ್ಮಲಿಂಗಯ್ಯ (70) ಮೃತ.

ಜೀವಿಪಾಳ್ಯದ ಬಳಿ ಗುಡೇಮಾರನ ಹಳ್ಳಿ ಕಡೆ ನಡೆದುಕೊಂಡು ಹೋಗುತ್ತಿದ್ದ ಬೊಮ್ಮಲಿಂಗಯ್ಯ ಅವರಿಗೆ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಮಾರು ವರ್ಷಗಳಿಂದ ಬೊಮ್ಮಲಿಂಗಯ್ಯ ಎಲ್ಲೆಂದರಲ್ಲಿ ವಾಸಿಸುತ್ತಿದ್ದು ಗ್ರಾಮಕ್ಕೆ ಬರುತ್ತಿರಲಿಲ್ಲ ಎನ್ನಲಾಗಿದೆ. ಮೃತರಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ.

ವಿಷಯ ತಿಳಿದ ಮಾಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ವಾರಸುದಾರರಿಗೆ ನೀಡಲಾಯಿತು. ಬುಧವಾರ ಅಂತ್ಯಕ್ರಿಯೆ ನೆರವೇರಿತು. ಅಪಘಾತವಾದ ಸ್ಥಳ ಬಳಿ ಇರುವ ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದು, ಅಪಘಾತಕ್ಕೆ ಕಾರಣವಾದ ವಾಹನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net