

ರಾಮನಗರ: ಕಳೆದ ಹಲವಾರು ವರ್ಷಗಳಿಂದಲೂ ನಡೆಯುತ್ತಿದ್ದ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಜಟಾಪಟಿ ಅಂತಿಮ ಹಂತಕ್ಕೆ ತಲುಪಿದ್ದು, ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ನಿರ್ಧಾರ ಮಾಡಲಾಗಿದೆ.
ಮುಖ್ಯಮಂತ್ತಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ, ಇತ್ತೀಚಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಮನಗರ ಹೆಸರು ಬದಲಾವಣೆಗೆ ಮಾಡಲಾಗಿದ್ದ ಮನವಿಯನ್ನು ಪುರಸ್ಕರಿಸಲಾಗಿದೆ.
ಇದರೊಂದಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸೆಡ್ಡು ಹೊಡೆದು ತಮ್ಮ ಇಚ್ಚೆಯಂತೆ ರಾಮನಗರ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಯಶಸ್ವಿ ಆಗಿದ್ದಾರೆ.
ಇದರ ಜೊತೆ ಇನ್ನೊಂದು ಸುತ್ತಿನ ರಾಜಕೀಯ ಮತ್ತು ಕಾನೂನು ಸರಮವೂ ಆರಂಭಗೊಳ್ಳಲಿದೆ.