

ರಾಮನಗರ: ವಿದ್ಯಾರ್ಥಿಗಳಿಗೆ ನವೋದಯ ವಿದ್ಯಾಲಯದ ಮಹತ್ವ ತಿಳಿಸಿ, ನವೋದಯ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ನವೋದಯ ವಿದ್ಯಾರ್ಥಿ ಸಮಿತಿ ಸಂಸ್ಥಾಪಕ ಅಧ್ಯಕ್ಷ ಸೋಮೇಶ್ ಸಲಹೆ ನೀಡಿದರು.
ತಾಲೂಕಿನ ಕೈಲಾಂಚ ಹೋಬಳಿಯ ಅವ್ವೆರಹಳ್ಳಿ ಸರ್ಕಾರಿ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ, ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.
ಗ್ರಾಮೀಣ ಹಾಗೂ ಸರ್ಕಾರಿ ಶಾಲೆಗಳ ಮಕ್ಕಳು ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಬೇಕು ಎಂದರು.
ಈ ಅಭಿಯಾನದಲ್ಲಿ ಬೆಂಗಳೂರು ಗ್ರಾಮಾಂತರ, ದೊಡ್ಡಬಳ್ಳಾಪುರ ನವೋದಯ ವಿದ್ಯಾಲಯದ ಹಳೇ ವಿದ್ಯಾರ್ಥಿಗಳಾದ ಎನ್.ಸಿ.ರಮೇಶ್, ಹೇಮಲತಾ, ಬೈರೇಗೌಡ ಹಾಗೂ ಶಿಕ್ಷಕರು, ಸಿಬ್ಬಂದಿ ಭಾಗವಹಿಸಿ, ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಅರ್ಜಿ ತುಂಬಿಸಿ, ನವೋದಯ ಪರೀಕ್ಷೆಯ ಬಗ್ಗೆ ಮಾಹಿತಿ ನೀಡಿದರು.
ತಾಲೂಕಿನ ಶ್ಯಾನುಭೋಗನ ಹಳ್ಳಿ, ಜಾಲಮಂಗಲ, ಐಜೂರು ಸೇರಿ ಹಲವು ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ, ನವೋದಯ ಪರೀಕ್ಷೆ ಜಾಗೃತಿ ಅಭಿಯಾನ ನಡೆಸಲಾಯಿತು.