

ರಾಮನಗರ: ನಾನೆಂದು ನಿಮ್ಮ ಜೊತೆಯಲ್ಲೇ ಇರುತ್ತೇನೆ ಎನ್ನುವ ಹೇಳುವ ಮೂಲಕ ಸೋಲಿನ ಸೂತಕದಲ್ಲಿ ಇರುವ ರಾಮನಗರ ಜೆಡಿಎಸ್ ಕಾರ್ಯಕರ್ತರಿಗೆ ಧೈರ್ಯ ತುಂಬುವ ಸಂದೇಶವನ್ನು ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಂಚಿಕೊಂಡಿದ್ದಾರೆ.
ಭಾನುವಾರ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ರವಾನೆ ಮಾಡಿರುವ ಅವರು, ನನ್ನನ್ನು ಬೆಂಬಲಿಸಿದ ಕ್ಷೇತ್ರದ ಜನತೆಗೆ ನನ್ನ ನಮನಗಳು, ಈ ಒಂದು ಸೋಲು ನಿಮ್ಮ ಸೇವೆ ಮಾಡಬೇಕು ಎನ್ನುವ ನನ್ನ ಅದಮ್ಯ ಸಂಕಲ್ಪಕ್ಕೆ ತಡೆ ಒಡ್ಡಲಾರದು. ನಾನೆಂದೂ ನಿಮ್ಮ ಜತೆಯಲ್ಲೇ ಇರುತ್ತೇನೆ, ನಿಮಗಾಗಿ ಜೀವಿಸುತ್ತೇನೆ. ಸೋಲನ್ನು ಸಮಚಿತ್ತದಿಂದ ಸ್ವೀಕರಿಸಿ ಮುನ್ನಡೆಯುತ್ತೇನೆ.
ಅದು ನಾನು ನನ್ನ ತಾತ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ತಂದೆ ಎಚ್.ಡಿ.ಕುಮಾರಸ್ವಾಮಿ ಅವರಿಂದ ಕಲಿತ ಪಾಠ. ಎಡವಿದ್ದೇನೆ, ಮತ್ತೆ ಎದ್ದು ಓಡುತ್ತೇನೆ. ಬಿದ್ದ ಮಗುವನ್ನು ಮೇಲೆತ್ತುವ ನಿಮ್ಮ ಪ್ರೀತಿ, ವಾತ್ಸಲ್ಯವನ್ನು ನಾನು ಬಲ್ಲೆ, ನಾನೆಂದು ನಿಮ್ಮ ಜೊತೆಯಲ್ಲೇ ಇರುತ್ತೇನೆ ಎಂದಿದ್ದಾರೆ.