ಇತರ ಕಾರ್ಯಗಳಿಗೆ ಪೌರಕಾರ್ಮಿಕರ ಬಳಕೆ ಬೇಡ

11-07-rama-Pourakarmika
Published on

ಅಧಿಕಾರಿಗಳಿಗೆ ಡಾ. ಅವಿನಾಶ್​ ಮೆನನ್​ ರಾಜೇಂದ್ರನ್​ ಸೂಚನೆಸರ್ಕಾರಿ ಕಚೇರಿ ಆವರಣ ಸ್ವಚ್ಛವಾಗಿಡಲು ನಿರ್ದೇಶನ

 ರಾಮನಗರ
ಜಿಲ್ಲೆಯಲ್ಲಿರುವ ಅಶುದ್ಧ ಶೌಚಗೃಹಗಳನ್ನು ಶುದ್ಧ ಶೌಚಗೃಹಗಳಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಅವಿನಾಶ್​ ಮೆನನ್​ ರಾಜೇಂದ್ರನ್​ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮ್ಯಾನ್ಯುಯಲ್​ ಸ್ಕಾ$್ಯವೆಂಜರ್ಸ್​ ನೇಮ

ಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಅನುಷ್ಠಾನ ಸಂಬಂಧ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 26,276 ಶುದ್ಧ, 220 ಅಶುದ್ಧ ಶೌಚಗೃಹಗಳಿದ್ದು, ಇವುಗಳನ್ನು ಶುದ್ಧವಾಗಿ ಪರಿವರ್ತಿಸಲು ಅಗತ್ಯ ಕ್ರಮವಹಿಸಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳು, ಶೌಚಗೃಹ ಹಾಗೂ ಆವರಣವನ್ನು ಸ್ವಚ್ಛವಾಗಿಡಬೇಕು. ಪೌರಕಾರ್ಮಿಕರನ್ನು ಸ್ವಚ್ಛಗೊಳಿಸುವ ಕಾರ್ಯದ ಜತೆಗೆ ಇತರ ಇಲಾಖೆಗಳ ಸ್ವಚ್ಛತಾ ಕಾರ್ಯಕ್ಕೆ ಬಳಸಿಕೊಳ್ಳುತ್ತಿರುವುದು ತಿಳಿದುಬಂದಿದೆ. ಇನ್ನು ಮುಂದೆ ಪೌರ ಕಾರ್ಮಿಕರನ್ನು ಬೇರೆ ಇಲಾಖೆ ಕಾರ್ಯಗಳಿಗೆ ಬಳಸಿಕೊಳ್ಳಬಾರದು ಎಂದು ತಿಳಿಸಿದರು.

ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯುಜಿಡಿ ಕಾರ್ಯವನ್ನು ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಜಟ್ಟಿಂಗ್​ ಮತ್ತು ಸಕ್ಕಿಂಗ್​ ಯಂತ್ರಗಳನ್ನು ಬಳಸುವ ಬಗ್ಗೆ ಈಗಾಗಲೇ ತರಬೇತಿ ನೀಡಲಾಗಿದೆ. ಇನ್ನು ಹೆಚ್ಚಿನ ತರಬೇತಿ ನೀಡುವಂತೆ ತಿಳಿಸಿದರು.
ಜಿಲ್ಲೆಯ ಎಲ್ಲ ಪೌರ ಕಾರ್ಮಿಕರಿಗೆ, ವಾಹನ ಚಾಲಕರಿಗೆ, ಲೋಡರ್ಸ್​, ಸ್ವಚ್ಛತಾ ಕಾರ್ಮಿಕರಿಗೆ, ಯುಜಿಡಿ ಕಾರ್ಮಿಕರಿಗೆ ಆರೋಗ್ಯ ಪರೀೆ ಮಾಡಿಸಬೇಕು. ಅಗತ್ಯ ಚಿಕಿತ್ಸೆ ಕೊಡಿಸುವ ಜತೆಗೆ ವೈದ್ಯರಿಂದ ಕೌನ್ಸೆಲಿಂಗ್​ ಮಾಡಿಸಿ ಆರೋಗ್ಯ ಸುಧಾರಣೆಗೆ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಜೀವವಿಮೆ ಮಾಡಿಸಿ ಅದರ ಅನುಪಾಲನಾ ವರದಿಯನ್ನು ನೀಡುವಂತೆ ತಿಳಿಸಿದರು.

ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿನ ಖಾಸಗಿ ಆಸ್ಪತ್ರೆಗಳಲ್ಲಿ ಉತ್ಪತ್ತಿಯಾಗುವ ಅಶುದ್ಧ ನೀರನ್ನು ಹಾಗೂ ರಕ್ತಮಿಶ್ರಿತ ಅಶುದ್ಧ ನೀರು ನೇರವಾಗಿ ಚರಂಡಿ ಸೇರುತ್ತಿದ್ದು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮ ಉಲ್ಲಂನೆಯಾಗುತ್ತಿದೆ. ಈ ಸಂಬಂಧ ನಗರಸಭೆ ಆಯುಕ್ತರು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಿ, ವರದಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಮನೆ ರಹಿತ ಪೌರ ಕಾರ್ಮಿಕರಿಗೆ / ಸಫಾಯಿ ಕರ್ಮಚಾರಿಗಳ ಕುಟುಂಬದವರಿಗೆ ನಿವೇಶನ ಗುರುತಿಸಿ ಹಂಚಿಕೆ ಮಾಡಬೇಕು. ನಗರ ಸ್ಥಳಿಯ ಸಂಸ್ಥೆಗಳ ಪೌರಕಾರ್ಮಿಕರು ವಾಸವಿರುವ ಕಾಲನಿಗಳಿಗೆ ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ ಮತ್ತು ಇನ್ನಿತರ ಅಗತ್ಯ ಮೂಲಸೌಕರ್ಯ ಒದಗಿಸುವಂತೆ ತಿಳಿಸಿದರು.

ಜಿಪಂ ಸಿಇಒ ದಿಗ್ವಿಜಯ್​ ಬೋಡ್ಕೆ, ಉಪಭಾಗಾಧಿಕಾರಿ ಮಂಜುನಾಥ್​, ಡಿವೈಎಸ್​ಪಿ ದಿನಕರ್​ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೇಶ್​, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಶಿವಕುಮಾರ ಸ್ವಾಮಿ, ನಾಗರಾಜು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರವೇಶ ಪರೀೆಕ್ಷೆ ಇಲ್ಲದೆ ನೇರ ಪ್ರವೇಶ
ಪೌರಕಾರ್ಮಿಕರ ಮಕ್ಕಳಿಗೆ ಯಾವುದೇ ಪ್ರವೇಶ ಪರೀೆಕ್ಷೆ ಇಲ್ಲದೆ ನೇರವಾಗಿ ಶಾಲೆ ಪ್ರವೇಶಕ್ಕೆ ಅವಕಾಶವಿರುತ್ತದೆ. ಆದ್ದರಿಂದ ಪ್ರತಿಷ್ಠಿತ ಶಾಲೆಗಳಲ್ಲಿ ಪೌರಕಾರ್ಮಿಕರ ಮಕ್ಕಳಿಗೆ ಪ್ರವೇಶಕ್ಕೆ ಅವಕಾಶ ನೀಡಲು ಕ್ರಮವಹಿಸಿ. ನಗರಸಭೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಪೌರಕಾರ್ಮಿಕರ ಮನೆಗಳಿಗೆ ಭೇಟಿ ನೀಡಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸುವ ಕಾರ್ಯ ಮಾಡಬೇಕು ಎಂದು ಡಾ. ಅವಿನಾಶ್​ ಮೆನನ್​ ರಾಜೇಂದ್ರನ್​ ಸೂಚನೆ ನೀಡಿದರು.

ಪಿಎಫ್​, ಇಎಸ್​ಐ ವರದಿ ನೀಡಿ
ಹೊರಗುತ್ತಿಗೆ ನೌಕರರಿಗೆ ಭವಿಷ್ಯ ನಿಧಿ (ಪಿಎಫ್​) ಹಾಗೂ ಕಾರ್ಮಿಕರ ಆರೋಗ್ಯ ವಿಮೆ (ಇಎಸ್​ಐ) ಯನ್ನು ನೌಕರರ ವೇತನದಿಂದ ಕಡಿತ ಮಾಡಿ ನೌಕರರ ಖಾತೆಗೆ ಜಮೆ ಆಗುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳುವುದು ಎಲ್ಲ ಬಟವಾಡೆ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಪ್ರತಿ ತಿಂಗಳು ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಈ ಬಗ್ಗೆ ವರದಿ ನೀಡಬೇಕು ಹಾಗೂ ಸಮಸ್ಯೆ ಇದ್ದರೆ ಜಿಲ್ಲಾ ಕಾರ್ಮಿಕ ಅಧಿಕಾರಿಯನ್ನು ಭೇಟಿ ಮಾಡಿ ಪರಿಹರಿಸಿಕೊಳ್ಳುಂತೆ ಜಿಲ್ಲಾಧಿಕಾರಿ ತಿಳಿಸಿದರು.


ಕಸ ಬೇರ್ಪಡಿಸದಿದ್ದರೆ ದಂಡ
ರಾಮನಗರ ಜಿಲ್ಲೆಯಲ್ಲಿ ಇನ್ನು ಮುಂದೆ ಹೋಟೆಲ್​, ಆಸ್ಪತ್ರೆ, ಬೇಕರಿ, ಅಂಗಡಿಗಳು ಮತ್ತು ನಿವಾಸಿಗಳು ಹಸಿ ಕಸ ಮತ್ತು ಒಣ ಕಸವನ್ನು ಕಡ್ಡಾಯವಾಗಿ ಬೇರ್ಪಡಿಸಿ ನಗರಸಭೆ ವಾಹನಕ್ಕೆ ನೀಡಬೇಕು. ಇಲ್ಲವಾದಲ್ಲಿ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net