ತಮಿಳುನಾಡಿಗೆ ನೀರು ಬಿಡಬೇಡಿ ಟೋಲ್ ಬಳಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ

IMG-20230913-WA0039
Published on
ಬಿಡದಿ: ತಮಿಳುನಾಡಿಗೆ ಕಾವೇರಿ ನೀರು ಹರಿಯುತ್ತಿರುವುದನ್ನ ವಿರೋಧಿಸಿ ಕನ್ನಡಪರ ಸಂಘಟನೆ ಕಾರ್ಯಕರ್ತರಿಂದ ಕಣ್ಮಿಣಕಿ ಟೋಲ್ ಬಳಿ ಪ್ರತಿಭಟನೆ ನಡೆಸಲಾಯಿತು.
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಟೋಲ್ ಬಳಿ ವಿವಿಧ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಹೆದ್ದಾರಿಯಲ್ಲಿ ಉರುಳು ಸೇವೆ ಮಾಡುವ ಮೂಲಕ ಖಾಲಿ ಬಿಂದಿಗೆ ಹಿಡಿದು ಪ್ರತಿಭಟಿಸಿದರು.
ಸಿದ್ದರಾಮಯ್ಯ,  ಡಿಕೆ ಶಿವಕುಮಾರ್ ‌ವಿರುದ್ಧ ಘೋಷಣೆ ಕೂಗಿದರು. ಈ ಕೂಡಲೇ ತಮಿಳುನಾಡಿಗೆ ಹರಿಯುತ್ತಿರುವ ನೀರು ನಿಲ್ಲಿಸಬೇಕೆಂದು ಪ್ರತಿಭಟನಾಕಾರರು ಮನವಿ ಮಾಡಿದರು.
ಟೋಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರು  ಹೆದ್ದಾರಿ ತಡೆ ಮಾಡಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಹೆದ್ದಾರಿ ತಡೆ ಮಾಡಬೇಡಿ ಎಂದು ಮನವಿ ಮಾಡಿದರು ಕೇಳದೆ ಹೆದ್ದಾರಿ ತಡೆಯಲು ಮುಂದಾದ ಕಾರ್ಯಕರ್ತರನ್ನ ಕುಂಬಳಗೂಡಿನ ಪೊಲೀಸರು ವಶಕ್ಕೆ ಪಡೆಯಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net