ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಿ

31-03-Shiva-1
ವಿದ್ಯಾರ್ಥಿನೀಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಆಗ್ರಹಿಸಿ ಬೇಡ ಜಂಗಮ ಸಮಿತಿ ಸದಸ್ಯರು ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಶುಕ್ರವಾರ ಮನವಿ ಸಲ್ಲಿಸಿದರು. ಸಮಿತಿ ಗೌರವಾಧ್ಯಕ್ಷ ಪ್ರಭು ಶಾಸ್ತ್ರಿ, ಅಧ್ಯಕ್ಷ ವೀರಯ್ಯಸ್ವಾಮಿ ಆಶಾಪುರ, ಪ್ರಧಾನ ಕಾರ್ಯದರ್ಶಿ ಶರಣಬಸವ ಹಿರೇಮಠ, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಸ್ವಾಮಿ, ಸಂಧ್ಯಾ ಹಿರೇಮಠ ಇದ್ದರು.
Published on

ರಾಯಚೂರು: ರಾಮನಗರ ಜಿಲ್ಲೆಯಲ್ಲಿ ವಿದ್ಯಾರ್ಥಿನೀಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಆರೋಪಿಗಳನ್ನು ಬಂಧಿಸಬೇಕು ಎಂದು ತಾಲೂಕು ಬೇಡ ಜಂಗಮ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಶುಕ್ರವಾರ ಮನವಿ ಸಲ್ಲಿಸಿದರು.


ಘಟನೆ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಕಾನೂನುನಡಿಯಲ್ಲಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಸಾಮೂಹಿಕವಾಗಿ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಅತ್ಯಾಚಾರಿಗಳಿಗೆ ಜಾಮೀನು ನೀಡಬಾರದು. ಅಲ್ಲದೆ ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ 50 ಲಕ್ಷ ರೂ.ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.


ನಿಯೋಗದಲ್ಲಿ ಸಮಿತಿ ಗೌರವಾಧ್ಯಕ್ಷ ಪ್ರಭು ಶಾಸ್ತ್ರಿ, ಅಧ್ಯಕ್ಷ ವೀರಯ್ಯಸ್ವಾಮಿ ಆಶಾಪುರ, ಪ್ರಧಾನ ಕಾರ್ಯದರ್ಶಿ ಶರಣಬಸವ ಹಿರೇಮಠ, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಸ್ವಾಮಿ, ಸಂಧ್ಯಾ ಹಿರೇಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net