

ರಾಮನಗರ: ಇಂದಿನ ಸ್ಪರ್ಧಾತ್ಮ ಯುಗದಲ್ಲಿ ವಿದ್ಯಾರ್ಥಿಗಳು ದುಶ್ಚಟಗಳ ದಾಸರಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದ್ದು, ಉತ್ತಮ ಸಮಾಜ ನಿರ್ಮಾಣಕ್ಕೆ ಸಾಧಕರ ಆದರ್ಶ ಮತ್ತು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳ ಬೇಕೆಂದು, ಪದವಿ ಪೂರ್ವ ಶಿಕ್ಷಣ ಇಲಾಖೆ ರಾಮನಗರ ಜಿಲ್ಲಾ ಉಪನಿರ್ದೇಶಕ ಸಿ.ಕೆ. ಗೋವಿಂದರಾಜು ತಿಳಿಸಿದರು.
ತಾಲೂಕಿನ ಸುಗ್ಗನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಥಮ ಪಿ.ಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಮನಗರ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಕೋತ್ತಿಪುರ ಶಿವಣ್ಣ ಮಾತನಾಡಿ ಪರಿಸರದ ಮೇಲೆ ನಗರೀಕರಣದ ಪ್ರಭಾವವನ್ನು ಕುರಿತು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಸದಾನಂದ ಮಾತನಾಡಿ, ಉತ್ತಮ ಭವಿಷ್ಯಕ್ಕಾಗಿ ಕಠಿಣ ಪರಿಶ್ರಮ ಮತ್ತು ಸ್ಪರ್ಧಾತ್ಮಕ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಎಸ್ ಆರ್ ರಾಮಕೃಷ್ಣಯ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್, ಮಾಯಗಾನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ದೇವರಾಜು, ಉಪನಿರ್ದೇಶಕರ ಕಚೇರಿ ಸಿಬ್ಬಂದಿ ಹನುಮೇಗೌಡ ಹಾಗೂ ಉಪನ್ಯಾಸಕರಾದ ಪ್ರದೀಪ್ ಎಂ.ಎನ್, ಚಂದ್ರಶೇಖರಯ್ಯ, ದಿವ್ಯದರ್ಶಿನಿ, ದೇವರಾಜ ಡಿ, ಹರೀಶ್ ಬಿ, ಡಾ. ಸುರೇಶ್‌ಕುಮಾರ್, ಶೃತಿ ಭಾಗವಹಿಸಿದ್ದರು. ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿಯರಾದ ಐಶ್ವರ್ಯ ಮತ್ತು ಚೈತ್ರಾ ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು, ಯಶಸ್ವಿನಿ ಸ್ವಾಗತಿಸಿದರು, ಹೇಮಲತಾ ಕೆ ಎಸ್ ವಂದಿಸಿದರು.