

ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ರಾಜು ಸಲಹೆಸಂತೋಷ, ಸಮೃದ್ಧಿ ಜೀವನಕ್ಕೆ ಪ್ರತಿಜ್ಞೆ ಮಾಡಿ
ರಾಮನಗರ
ಕುಟುಂಬ ಯೋಜನೆಗಾಗಿ ರಾಷ್ಟ್ರೀಯ ಕಾರ್ಯಕ್ರಮವನ್ನು ಪ್ರಾರಂಭಿಸಿದ ವಿಶ್ವದ ಮೊದಲ ದೇಶ ಭಾರತವಾಗಿದೆ ಎಂದು ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ರಾಜು ತಿಳಿಸಿದರು.
ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಮನಗರ, ಜಿಲ್ಲಾ ಆರ್ಸಿಎಚ್ ಅಧಿಕಾರಿಗಳ ಕಚೇರಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ವಿವಿಧ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನಗರದ ಶಾಂತಿನಿಕೇತನ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭಾರತವು ಫಲವತ್ತತೆಯ ದರದಲ್ಲಿ ಉತ್ತಮ ಪ್ರಗತಿ ಸಾಧಿಸಿದೆ. ವಿಶ್ವ ಜನಸಂಖ್ಯಾ ದಿನವು ಇತಿಹಾಸದಲ್ಲಿ ನಿರ್ಣಾಯಕ ಕ್ಷಣದಲ್ಲಿ ಬರುತ್ತದೆ. ಇದರಲ್ಲಿ ಭಾರತದ ಜನಸಂಖ್ಯೆಯ ಸ್ಥೀರಿಕರಣದ ಕನಸನ್ನು ನನಸಾಗಿಸಲು ಪ್ರತಿಯೊಬ್ಬ ಸಂಭಾವ್ಯ ಫಲಾನುಭವಿಯನ್ನು ತಲುಪುವ ಪ್ರಾಮುಖ್ಯತೆಯ ಬಗ್ಗೆ ಹೇಳಬೇಕಿದೆ. 2023ರ ವಿಶ್ವ ಜನಸಂಖ್ಯಾ ದಿನಾಚರಣೆಯ ೂಷವಾಕ್ಯ ಸಂತೋಷ ಮತ್ತು ಸಮೃದ್ದಿಯ ಜೀವನವನ್ನು ಆಯ್ಕೆ ಮಾಡಿಕೊಳ್ಳುತ್ತೇವೆ ಎಂದು ಪ್ರತಿೆ ಮಾಡುವ ಮೂಲಕ ಜನಸಂಖ್ಯೆ ನಿಯಂತ್ರಿಸಬೇಕು ಎಂದು ಕರೆ ನೀಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಶಶಿಕಲಾ ಮಾತನಾಡಿ, ಮಹಿಳಾ ಕುಟುಂಬ ಯೋಜನೆ ತಾತ್ಕಾಲಿಕ ವಿಧಾನದಲ್ಲಿ ಮಾಲಾ ಎನ್, ಛಾಯ, ತುರ್ತು ಗರ್ಭ ನಿರೋಧಕ ನುಂಗುವ ಮಾತ್ರೆಗಳು, 5 ರಿಂದ 10 ವರ್ಷಗಳ ದೀರ್ಘಾವದಿ ಅಂತರ ಚುಚ್ಚು ಮದ್ದು, ಶಾಶ್ವತ ಧಾನದಲ್ಲಿ ಟುಬ್ಯಾಕ್ಟಮಿ, ಉದರ ದರ್ಶಕ ಶಸಚಿಕಿತ್ಸೆ, ಪುರುಷರಿಗಾಗಿ ತಾತ್ಕಾಲಿಕ ವಿಧಾನದಲ್ಲಿ ನಿರೋಧ್ ಬಳಕೆ, ಶಾಶ್ವತ ವಿಧಾನವಾಗಿ ನ್ಯೋಸ್ಕಾಲ್ಪೆಲ್ ವ್ಯಾಸಕ್ಟಮಿ ಶಸಚಿಕಿತ್ಸೆ ಈ ಎಲ್ಲ ಸೇವಾ ಸೌಲಭ್ಯಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ದೊರೆಯುತ್ತವೆ. ಹಾಗೂ ಶಸಚಿಕಿತ್ಸೆ ಮಾಡಿಸಿಕೊಂಡ ಫಲಾನುಭವಿಗಳಿಗೆ ಪೋತ್ಸಾಹ ಧನ ನೀಡಲಾಗುತ್ತಿದೆ ಎಂದರು.
ಜಿಲ್ಲಾ ಸವೇಕ್ಷಣಾಧಿಕಾರಿ ಕಿರಣ್ ಶಂಕರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್, ವಿದ್ಯಾಸಂಸ್ಥೆಯ ಪ್ರಾಧ್ಯಾಪಕರಾದ ಕೃಷ್ಣ, ಡಾ. ಹರ್ಷಿತ್, ಡಾ. ಆಯುಷ್, ರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದಾಸಪ್ಪ, ವಿನಯ್ಕುಮಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಹದೇವಯ್ಯ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಉಮಾದೇವಿ, ಆರೋಗ್ಯ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.