

ರಾಮನಗರ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾ ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ಭೇಟಿ ಮಾಡಿದ ನಿಶಾ, ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ.
ರಾಜಕಾರಣದಲ್ಲಿ ಬದ್ಧ ವೈರಿಗಳೆಂದೇ ಯೋಗೇಶ್ವರ್ ಮತ್ತು ಡಿ.ಕೆ.ಶಿವಕುಮಾರ್ ಗುರುತಿಸಿಕೊಂಡಿದ್ದು, ಇದೀಗ ಯೋಗೇಶ್ವರ್ ಪುತ್ರಿ ನಿಶಾ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಅಲ್ಲದೆ ಭೇಟಿಯ ಫೋಟೋ ಸಹ ಸಾರ್ವಜನಿಕವಾಗಿ ಹರಿದಾಡುತ್ತಿದೆ. ಆಲ್ಲದೆ, ಈ ಭೇಟಿಯನ್ನು ವಿವಿಧ ರೀತಿಯಲ್ಲಿ ವ್ಯಾಖ್ಯಾನಿಸಲಾಗುತ್ತಿದೆ.