ವಿಶ್ವದಲ್ಲೇ ಟೆಕ್ನಾಲಜಿ ಹಬ್​​​ನಲ್ಲಿ ಬೆಂಗಳೂರು ಐದನೇ ಸ್ಥಾನ ಪಡೆದಿದೆ: ರಾಷ್ಟ್ರಪತಿ ರಾಮನಾಥ್ ಕೋವಿಂದ್

Capture
Published on

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸದ ನಿಮಿತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

ಈ ವಿಶೇಷ ಕಾರ್ಯಕ್ರಮ ಆಯೋಜಿಸಿರುವುದಕ್ಕೆ ಧನ್ಯವಾದಗಳು. ಕಲೆ, ಸಾಹಿತ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ವಿಚಾರದಲ್ಲಿ ಕರ್ನಾಟಕ ರಾಜ್ಯ ಮುಂದಿದೆ. ಫೀಲ್ಡ್ ಮಾರ್ಷಲ್ ಕೆ.ಎಮ್. ಕಾರಿಯಪ್ಪ ಅವರನ್ನು ಸ್ಮರಿಸಿದ ರಾಷ್ಟ್ರಪತಿಗಳು, ಭಾರತೀಯ ಸೇನೆಗೆ ಕೊಡಗು ಜಿಲ್ಲೆ ವಿಶೇಷವಾದ ಕೊಡುಗೆ ನೀಡಿದೆ ಎಂದರು.

ಬೆಂಗಳೂರು ನಗರ 2021 ರ ಟೆಕ್ನಾಲಜಿ ಹಬ್​​​ನಲ್ಲಿ ವಿಶ್ವದಲ್ಲೇ ಐದನೇ ಸ್ಥಾನ ಪಡೆದುಕೊಂಡಿದೆ. ಅಲ್ಲದೇ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ನಗರಗಳಲ್ಲಿ ಒಂದು ಎಂದರು. ಅಲ್ಲದೇ ಮಿಲಿಟರಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲಿ ಎಂದು ಆಶಿಸಿದರು.

ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಮನಾಥ್ ಕೋವಿಂದ್ ಮತ್ತು ಸವಿತಾ ಕೋವಿಂದ್ ಅವರನ್ನು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net