ಹತ್ಯೆಯ ಸೂತ್ರಧಾರಿಗಳ ಪತ್ತೆಹಚ್ಚಿ: ಮಾಜಿ ಸಚಿವ ರಮಾನಾಥ ರೈ ಒತ್ತಾಯ

New Project (12)
Published on

ಬಂಟ್ವಾಳ: ಮತೀಯ ಹತ್ಯೆಗಳು ಮತ್ತೊಮ್ಮೆ ಆರಂಭವಾಗಿರುವುದು ಆತಂಕದ ಸಂಗತಿ. ಕೊಳತ್ತಮಜಲಿನಲ್ಲಿ ನಡೆದ ಅಬ್ದುಲ್ ರಹೀಂ ಹತ್ಯೆ ಹಾಗೂ ಕಲಂದರ್ ಶಾಫಿ ಮೇಲಿನ ಹಲ್ಲೆ ಜನರಲ್ಲಿ ಭಯ ಮೂಡಿಸಿದೆ. ಇದರ ಸೂತ್ರಧಾರಿಗಳನ್ನು ಶೀಘ್ರವೇ ಪತ್ತೆಹಚ್ಚಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಈ ಘಟನೆಗೆ ಕಾರಣಕರ್ತರು, ಪ್ರಚೋದನಕಾರಿ ಭಾಷಣಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕೆಲಸ ಮಾಡಿದರೆ ಇದು ಸಾಧ್ಯ ಎಂದು ಒತ್ತಾಯಿಸಿದರು.

ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್‌ನ ಮುಸ್ಲಿಂ ನಾಯಕರು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದು ಅವರ ನೋವಿನ ಕಾರಣದಿಂದ. ಇದು ಪಕ್ಷಕ್ಕೆ ಮಾಡಿದ ದ್ರೋಹವಲ್ಲ. ಇದಕ್ಕೆ ಶೋಕಾಸ್ ನೋಟಿಸ್ ನೀಡಿದ್ದು, ಸರಿಯಾದ ಕ್ರಮವಲ್ಲ ಎಂದು ಆಕ್ಷೇಪ ಹೊರಹಾಕಿದರು.

ತಾಲೂಕಿನಲ್ಲಿ ಡೆಂೆ ಪ್ರಕರಣ ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ರಮಾನಾಥ ರೈ ಮನವಿ ಮಾಡಿಕೊಂಡರು.

ಪ್ರಮುಖರಾದ ಬೇಬಿ ಕುಂದರ್, ವಾಸು ಪೂಜಾರಿ, ಪಿಯೂಸ್ ಎಲ್.ರೋಡ್ರಿಗಸ್, ಪದ್ಮನಾಭ ರೈ, ಸುದೀಪ್ ಕುಮಾರ್ ಶೆಟ್ಟಿ, ಬಾಲಕೃಷ್ಣ ಅಂಚನ್, ಚಂದ್ರಶೇಖರ್ ಭಂಡಾರಿ, ಜಯಂತಿ ವಿ.ಪೂಜಾರಿ, ದೇವಪ್ಪ ಕುಲಾಲ್ ಪಂಜಿಕಲ್ಲು, ಸುದರ್ಶನ್ ಜೈನ್, ವೆಂಕಪ್ಪ ಪೂಜಾರಿ, ಅಬ್ಬಾಸ್ ಅಲಿ, ಮದುಸೂಧನ್ ಶೆಣೈ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net