ನ್ಯಾಯ ಸಮ್ಮತವಾಗಿ ಮಕ್ಕಳಲ್ಲಿ ಉತ್ತಮ ಪ್ರತಿಭೆ ಗುರುತಿಸಿ

14 NMT
Published on

ನ್ಯಾಮತಿ: ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಲು ಕಲಿಕಾ ಹಬ್ಬವು ಉತ್ತಮ ವೇದಿಕೆಯಾಗಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಿ.ರಾಮಪ್ಪ ಹೇಳಿದರು.

ತಾಲೂಕಿನ ಶಾಂತಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸುರಹೊನ್ನೆ ಕ್ಲಸ್ಟರ್ ಹಂತದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂದಿನ ಮಕ್ಕಳು ಸೂಕ್ಷ್ಮ ಮನಸ್ಥಿತಿ ಹೊಂದಿದ್ದು, ನ್ಯಾಯ ಸಮ್ಮತವಾಗಿ ಪ್ರತಿಭಾವಂತರನ್ನು ಗುರುತಿಸಿ ಮುಂದಿನ ಹಂತಕ್ಕೆ ಆಯ್ಕೆ ಮಾಡುವಂತೆ ಸಲಹೆ ನೀಡಿದರು.

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಪಿ.ಒ.ಅನ್ನಪೂರ್ಣ ಮಾತನಾಡಿ, ವಿದ್ಯಾರ್ಥಿಗಳು ಸರ್ಕಾರದಿಂದ ಸಿಗುವ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ, ತೃತಿಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಬಹುಮಾನ ವಿತರಣೆ ಮಾಡಿದರು.

ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇಸ್ವಾಮಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ, ಮಹೇಶ್ವರಪ್ಪ, ಸತ್ಯಪ್ರಕಾಶ ಮಾತನಾಡಿದರು. ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವ ಅಧ್ಯಕ್ಷ ಸಿದ್ದಪ್ಪ, ಕಾರ್ಯದರ್ಶಿ ಜ್ಞಾನೇಶ, ರಾಜ್ಯ ಸರ್ಕಾರಿ ನೌಕರ ಸಂಘದ ನಿರ್ದೇಶಕರಾದ ಪ್ರಭು, ಸುರೇಶ, ರೇಖಾ, ಸವಿತಾ, ಸುರಹೊನ್ನೆ ಗ್ರಾಪಂ ಅಧ್ಯಕ್ಷರು, ಸದಸ್ಯರು ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net