ರಾಮನ ಆದರ್ಶ ಎಲ್ಲರಿಗೂ ಪ್ರೇರಣೆ

28arsph1ep
ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶಾಸಕ ಕೆ.ಎಂ.ಶಿವಲಿಂಗೇಗೌಡ ಉದ್ಘಾಟಿಸಿದರು. ಎಂ.ಜಿ.ಸಂತೋಷ್ ಕುಮಾರ್, ಹನುಮಪ್ಪ, ಟಿ.ಜಿ.ಬಸವರಾಜ್, ಗಿರೀಶ್ ಇತರರಿದ್ದಾರೆ.
Published on

ಅರಸೀಕೆರೆ: ನಗರದ ತಾಲೂಕು ಕಚೇರಿ ಆವರಣದ ರೈತ ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಶನಿವಾರ ಮಹರ್ಷಿ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಕೆ.ಎಂ.ಶಿವಲಿಂಗೇಗೌಡ, ವಾಲ್ಮೀಕಿ ಅವರು ಸಾಮಾನ್ಯ ಬೇಡರ ಕುಲದಲ್ಲಿ ಜನಿಸಿ, ಅಗ್ರಗಣ್ಯ ಕವಿಯಾಗಿ, ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಮರ್ಯಾದಾ ಪುರುಷೋತ್ತಮ ಶ್ರೀರಾಮನ ಚರಿತ್ರೆಯನ್ನು ವಾಲ್ಮೀಕಿ ಮಹರ್ಷಿಗಳು ರಾಮಾಯಣ ಗ್ರಂಥದಲ್ಲಿ ಮನಮುಟ್ಟುವಂತೆ ವರ್ಣಿಸಿದ್ದಾರೆ. ಶ್ರೀರಾಮನ ಆದರ್ಶ ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕಿದೆ ಎಂದರು.

ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್, ವಾಲ್ಮೀಕಿ ಮಹಾಸಭಾ ತಾಲೂಕು ಅಧ್ಯಕ್ಷ ಟಿ.ಜಿ.ಬಸವರಾಜ್, ಮುಖಂಡರಾದ ಹನುಮಪ್ಪ, ಗಿರೀಶ್, ಸಮಾಜ ಕಲ್ಯಾಣಾಧಿಕಾರಿ ಪರಶಿವಮೂರ್ತಿ, ಬಾಯ್ಲರ್ ಕುಮಾರ್ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net