

ಕವಿತಾಳ: ನಾಯಕ ಸಮುದಾಯದವರು ಶಿಕ್ಷಣ ಪಡೆದಾಗ ಸರ್ಕಾರದ ಸವಲತ್ತು ಮತ್ತು ಉನ್ನತ ಸ್ಥಾನ ಪಡೆಯಬಹುದು ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.
ನೆಲಕೋಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಮೂರ್ತಿ ಅನಾವರಣ ಹಾಗೂ ವಾಲ್ಮೀಕಿ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ಮಹರ್ಷಿ ವಾಲ್ಮೀಕಿ ಹಾಕಿಕೊಟ್ಟಿರುವ ಮಾರ್ಗದಲ್ಲಿ ನಾವು ನಡೆಯುತ್ತಿದ್ದೇವೆ. ಮಹರ್ಷಿ ಬರೆದ ರಾಮಾಯಣದ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದರು.
ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ನಾಯಕ ಸಮುದಾಯದ ಸೌಲಭ್ಯಗಳಿಗಾಗಿ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಪ್ರಯತ್ನಿಸಬೇಕು. ಪ್ರಸನ್ನಾನಂದ ಪುರಿ ಸ್ವಾಮೀಜಿ, ಸಮುದಾಯದ ಅಭಿವೃದ್ಧಿಗಾಗಿ ಪ್ರಯತ್ನಿಸುತ್ತಿದ್ದಾರೆ. ಸ್ವಾಮೀಜಿ ಸಲಹೆಗಳನ್ನು ನಾವೆಲ್ಲ ಪಾಲಿಸಬೇಕೆಂದರು.
ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ರಾಜಾವೆಂಕಟಪ್ಪ ನಾಯಕ, ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿ ಕಾರ್ಜುನ ಪಾಟೀಲ್, ಗ್ರಾಪಂ ಅಧ್ಯಕ್ಷೆ ಬಸವಲಿಂಗಮ್ಮ ನಾಯಕ, ಪ್ರಮುಖರಾದ ಭೀಮಣ್ಣ ನಾಯಕ, ಹನುಮೇಶ ನಾಯಕ, ಆರ್.ಕೆ. ನಾಯಕ, ಶರಣಬಸವ ಜಾನೆಕಲ್, ಯಮನೂರು, ಸಿದ್ದಾರ್ಥ ಇದ್ದರು.