

ಬಾಳೆಹೊನ್ನೂರು: ಬಾಳೆಹೊನ್ನೂರು ಶ್ರೀರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ
ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ 34ನೇ ವರ್ಷದ
ಪೀಠಾರೋಹಣ ವರ್ಧಂತಿ ಮಹೋತ್ಸವ-ಜನಜಾಗೃತಿ ಧರ್ಮ ಸಮಾರಂಭ
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರದಲ್ಲಿ ೆ.1ಕ್ಕೆ
ನಡೆಯಲಿದೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ
ಸಿ.ಎಚ್.ಬಾಳನಗೌಡ ತಿಳಿಸಿದ್ದಾರೆ.
ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ನಡೆಯುವ ಸಮಾರಂಭದ
ಅಧ್ಯಕ್ಷತೆಯನ್ನು ಅಮ್ಮಿನಬಾವಿ ಪಂಚಗೃಹ ಹಿರೇಮಠದ ಶಾಂತಲಿಂಗ ಶಿವಾಚಾರ್ಯ
ಸ್ವಾಮೀಜಿ ವಹಿಸುವರು. ಮರಿಯಮ್ಮನಹಳ್ಳಿ ಮಲ್ಲಿಕಾರ್ಜುನ ಶಿವಾಚಾರ್ಯರು,
ನೆಗಳೂರು ಗುರುಶಾಂತ ಶಿವಾಚಾರ್ಯರು, ಅಮ್ಮಿನಬಾವಿ ಅಭಿನವ ಶಾಂತಲಿಂಗ
ಶಿವಾಚಾರ್ಯರು, ಹರಪನಹಳ್ಳಿ ವರಸದ್ಯೋಜಾತ ಶಿವಾಚಾರ್ಯರು, ನಂದಿಪುರದ
ಡಾ.ಮಹೇಶ್ವರ ಸ್ವಾಮಿಗಳು ನೇತೃತ್ವ ವಹಿಸುವರು. ನಾಡಿನ ವಿವಿಧ ಮಠಗಳ
ಶಿವಾಚಾರ್ಯರು, ಚುನಾಯಿತ ಪ್ರತಿನಿಧಿಗಳು, ಗಣ್ಯರು ಸಮಾರಂಭದಲ್ಲಿ
ಪಾಲ್ಗೊಳ್ಳುವರು ಎಂದು ಹೇಳಿದ್ದಾರೆ.
ಪೀಠಾರೋಹಣ ವರ್ಧಂತಿ ಮಹೋತ್ಸವದ ಅಂಗವಾಗಿ 1ರ ಬೆಳಿಗ್ಗೆ 10 ಗಂಟೆಗೆ
ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ
ಸಕಲ ವಾದ್ಯ ವೈಭವ, ಕಲಾ ಮೇಳಗಳೊಂದಿಗೆ ನಡೆಯಲಿದೆ. ಇದರೊಂದಿಗೆ ಕೃಷಿ
ಮೇಳ ಸಹ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.