

ಬಾಳೆಹೊನ್ನೂರು: ಬಾಳೆಹೊನ್ನೂರು ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಜುಲೈ ಮತ್ತು ಆಗಸ್ಟ್ ನಲ್ಲಿ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ.
ಜು.2 ರಿಂದ 4ರವರೆಗೆ ಬೆಂಗಳೂರಿನ ವಿಜಯನಗರದಲ್ಲಿ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಸಮಾರಂಭ, 7 ರಂದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಚಿಪ್ಪಲಕಟ್ಟಿ ಗ್ರಾಮದಲ್ಲಿ ಹಿರೇಮಠ ಕಲ್ಲಯ್ಯನವರ ಷಷ್ಟತ್ಯಬ್ಧಿ ಸಮಾರಂಭ, 8 ರಂದು ಅಜ್ಜಂಪುರ ತಾಲೂಕಿನ ಬುಕ್ಕಾಂಬು ಕ್ಷೇತ್ರದಲ್ಲಿ ಲಿಂ.ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳ ಶತಮಾನೋತ್ಸವದ ಪೂರ್ವಭಾವಿ ಸಮಾವೇಶದ ಸಾನ್ನಿಧ್ಯ ವಹಿಸುವರು.
10 ರಂದು ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ಗುರು ಪೂರ್ಣಿಮಾ ಅಂಗವಾಗಿ ವಾಸ್ತವ್ಯವಿದ್ದು ಭಕ್ತಾದಿಗಳಿಗೆ ದರ್ಶನಾಶೀರ್ವಾದ ನೀಡುವರು. 13ರಂದು ಚನ್ನರಾಯಪಟ್ಟಣ ತಾಲೂಕಿನ ನಾಗರನವಿಲೆಯಲ್ಲಿ ಶ್ರೀಜಗದ್ಗುರು ರೇಣುಕ ಪೂಜಾ ಮಂಟಪ ಸಮರ್ಪಣೆ ಸಮಾರಂಭದ ಸಾನ್ನಿಧ್ಯ ವಹಿಸುವರು. 14 ರಿಂದ 16ರವರೆಗೆ ಹರಿಹರ ನಗರದಲ್ಲಿ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಸಮಾರಂಭ, 18ರಿಂದ 22ರವರೆಗೆ ದಾವಣಗೆರೆ ಮಹಾನಗರದಲ್ಲಿ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಸಮಾರಂಭದಲ್ಲಿ ಭಾಗವಿಸಲಿದ್ದಾರೆ.
21, 22ರಂದು ದಾವಣಗೆರೆಯಲ್ಲಿ ಶ್ರೀಮದ್ವೀರಶೈವ ಮಹಾಮತ ಸಂಸ್ಥಾಪನಾಚಾರ್ಯ ಶ್ರೀಜಗದ್ಗುರು ರೇಣುಕಾದಿ ಪಂಚಾಚಾರ್ಯ ಪರಂಪರಾನುಗತ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಪಾಲ್ಗೊಳ್ಳುವರು. 24ರಂದು ಚನ್ನಗಿರಿ ತಾಲೂಕಿನ ತಾವರೆಕೆರೆ ಶಿಲಾಮಠದಲ್ಲಿ ಲಿಂ.ಶ್ರೀಸಿದ್ಧಲಿಂಗ ಶಿವಾಚಾರ್ಯರ ಪುಣ್ಯ ಸ್ಮರಣೋತ್ಸವ ಸಮಾರಂಭ, 25 ರಿಂದ ಆಗಸ್ಟ್ 23ರವರೆಗೆ ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ 34ನೇ ವರ್ಷದ ಶ್ರಾವಣ ಮಾಸದ ಇಷ್ಟಲಿಂಗ ಪೂಜಾನುಷ್ಠಾನ ಹಾಗೂ ಪುರಾಣ ಪ್ರವಚನ ಸಮಾರಂಭದ ಸಾನ್ನಿದ್ಯ ವಹಿಸುವರು ಎಂದು ಶ್ರೀ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ ತಿಳಿಸಿದ್ದಾರೆ.