ಶ್ರೀರಂಭಾಪುರಿ ಜಗದ್ಗುರುಗಳ ಜನ್ಮದಿನಾಚರಣೆ

IMG-20240108-WA0002.jpg
Published on

ಹುಬ್ಬಳ್ಳಿ: ಬಾಳೆಹೊನ್ನೂರು ಶ್ರೀರಂಭಾಪುರಿ ಜಗದ್ಗುರುಗಳ 68ನೇ ಜನ್ಮದಿನೋತ್ಸವ ಅಂಗವಾಗಿ ಶ್ರೀಮದ್ವೀರಶೈವ ಸದ್ಭೋದನ ಸಂಸ್ಥೆ ತಾಲೂಕು ಘಟಕದ ವತಿಯಿಂದ ನಗರದಲ್ಲಿ ಭಾನುವಾರ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಸ್ಥೆ ಅಧ್ಯಕ್ಷ ಪ್ರಕಾಶ ಬೆಂಡಿಗೇರಿ ಅಧ್ಯಕ್ಷತೆಯಲ್ಲಿ ಬೆಳಗ್ಗೆ ಹಳೇಹುಬ್ಬಳ್ಳಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀವಿರಭದ್ರಸ್ವಾಮಿ ಮೂತಿರ್ಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ನಡೆಯಿತು.

ಹುಬ್ಬಳ್ಳಿಯ ದುರ್ಗದ ಬೈಲ್ನಲ್ಲಿ ಶ್ರೀರಂಭಾಪುರಿ ಜಗದ್ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು.

ಶೇಖರಗೌಡ್ರು ಪಾಟೀಲ್, ಹನುಮಂತ ಅಂಕಲಗಿ, ಈಶ್ವರ್ ಭದ್ರಾಪುರ, ವೀರಭದ್ರಪ್ಪ ಮೇಟಿ, ಪದ್ಮಾವತಿ ಬಾಗಲಕೋಟಿ, ಬಸವರಾಜ ಪೂಜಾರ್, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net