ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ

27 MDG RAMBAPURI
Published on

ಮುಂಡರಗಿ: ತಾಲೂಕಿನ ಕಲಕೇರಿ ಗ್ರಾಮದಲ್ಲಿ ಗುರುವಾರ ಸಂಜೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಸಕಲ ವಾದ್ಯ ಮೇಳದೊಂದಿಗೆ ಶ್ರದ್ಧಾ ಭಕ್ತಿಯಿಂದ ಜರುಗಿತು.

ಗ್ರಾಮದ ಎಂ.ಬಿ. ಪಾಟೀಲ ಪದವಿ ಪೂರ್ವ ಕಾಲೇಜ್ ಆವರಣದಿಂದ ಹೊರಟ ಅಡ್ಡ ಪಲ್ಲಕ್ಕಿ ಮಹೋತ್ಸವ ಸಕಲ ಬಿರುದಾವಳಿಗಳೊಂದಿಗೆ ಪೂರ್ಣಕುಂಭ, ಕಳಶ, ಕನ್ನಡಿ, ವಾದ್ಯ ವೈಭವ ಕಲಾ ಮೇಳದೊಂದಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶ್ರೀ ಬಸವೇಶ್ವರ ದೇವಸ್ಥಾನ ಆವರಣದ ಸಮಾರಂಭದ ವೇದಿಕೆ ತಲುಪಿತು. ಅಡ್ಡಪಲ್ಲಕ್ಕಿ ಮಹೋತ್ಸವ ಮೆರವಣಿಗೆಯುದ್ದಕ್ಕೂ ಭಕ್ತರು ಜಗದ್ಗುರುಗಳಿಂದ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಶ್ರೀ ಮುದುಕೇಶ್ವರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯರು, ಶ್ರೀ ವೀರೇಶ್ವರ ಶಿವಾಚಾರ್ಯರು, ಡಾ. ಸುಜ್ಞಾನದೇವ ಶಿವಾಚಾರ್ಯರು, ಡಾ .ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು, ಶ್ರೀ ವೀರಭದ್ರ ಶಿವಾಚಾರ್ಯರು, ಶ್ರೀ ಅಭಿನವ ಪಟ್ಟದ ಸಿದ್ಧೇಶ್ವರ ಶಿವಾಚಾರ್ಯರು, ಶ್ರೀ ಮರುಳಾರಾಧ್ಯ ಶಿವಾಚಾರ್ಯರು, ಇನ್ನಿತರ ಪೂಜ್ಯರು, ಮಾಜಿ ಸಚಿವ ಎಸ್.ಎಸ್. ಪಾಟೀಲ, ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ, ಡಾ.ಎಲ್.ಎಸ್. ಪಾಟೀಲ, ಮುದಕನಗೌಡ ಪಾಟೀಲ, ಪಿ.ಎಂ. ಪಾಟೀಲ, ಜಯಣ್ಣ ದ್ರಾಕ್ಷಿ, ಸಹಸ್ರಾರು ಭಕ್ತರು, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net