

ಮೈಸೂರು: ಅನಾರೋಗ್ಯದಿಂದ ಶುಕ್ರವಾರ ನಿಧನರಾದ ಸಿದ್ದರಾಮನಹುಂಡಿ ನಿವಾಸಿ ರಾಮೇಗೌಡ ಅವರ ಅಂತ್ಯಕ್ರಿಯೆ ಶನಿವಾರ ಸ್ವ ಗ್ರಾಮದಲ್ಲಿ ನೆರವೇರಿತು.
ಅಂತ್ಯಕ್ರಿಯೆಯಲ್ಲಿ ರಾಮೇಗೌಡ ಅವರ ಸಹೋದರ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಅಶ್ವಿನ್ ಕುಮಾರ್, ಮಾಜಿ ಶಾಸಕ ಕೆ. ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ. ಪುಷ್ಪಾ ಅಮರ್‌ನಾಥ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಬಿ.ಜೆ.ವಿಜಯ ಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ ಸೇರಿದಂತೆ ಹಲವು ಗಣ್ಯರು ಮೃತರ ಅಂತಿಮ ದರ್ಶನ ಪಡೆದರು.