ಬಳ್ಳಾರಿ ಡಿಎಚ್‌ಒ ಆಗಿ ರಮೇಶ ಬಾಬು ಅಧಿಕಾರ ಸ್ವೀಕಾರ

BLY- 28-6
ಡಾ.ವೈ.ರಮೇಶ ಬಾಬು
Published on

ಬಳ್ಳಾರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಡಾ.ವೈ.ರಮೇಶ ಬಾಬು ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ನಿಕಟಪೂರ್ವ ಡಿಎಚ್‌ಒ ಡಾ.ಎಚ್.ಎಲ್.ಜನಾರ್ದನ್ ಅವರು ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಆಗಮಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಕ್ಷಯರೋಗ ನಿರ್ಮೂನಾಧಿಕಾರಿ ಹುದ್ದೆಯಲ್ಲಿ 2013 ರಿಂದ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಬಳ್ಳಾರಿಗೆ ವರ್ಗಾವಣೆಯಾಗಿದ್ದಾರೆ.

1993 ರಲ್ಲಿ ಹರಪನಹಳ್ಳಿ ತಾಲೂಕಿನ ಹಲವಾಗಲು ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಕರ್ತವ್ಯಕ್ಕೆ ಸೇರಿದರು. 2000 ರಿಂದ 2005 ರವರೆಗೆ ನಲ್ಲೂಡಿಯಲ್ಲಿ ವೈದ್ಯಾಧಿಕಾರಿಗಳಾಗಿ, 2005 ರಿಂದ 2007 ರವರೆಗೆ ದಾವಣಗೇರೆ ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿಯಾಗಿ, 2007 ರಿಂದ 2012 ರವರೆಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದಲ್ಲಿ ಉಪ ನಿರ್ದೇಶಕ (ಆರ್‌ಸಿಎಚ್, ಸಂಶೋಧನಾ ಅಧಿಕಾರಿ) ಗಳಾಗಿ ರಮೇಶ ಬಾಬು ಕರ್ತವ್ಯ ನಿರ್ವಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net