ರಮೇಶಬಾಬು ಯಾಳಗಿ ಅವರಿಗೆ ಸನ್ಮಾನ

26 MANVI 02
ಮಾನ್ವಿ ತಾಲೂಕು 10 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ಸಾಹಿತಿ ರಮೇಶಬಾಬು ಯಾಳಗಿ ದಂಪತಿಯನ್ನು ದೇವಾಂಗ ಸಮಾಜದ ಮಹಿಳಾ ಘಟಕದಿಂದ ಸನ್ಮಾನಿಸಲಾಯಿತು.
Published on

ಮಾನ್ವಿ: ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಫೆ.27ರಂದು 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಸಾಹಿತಿ ರಮೇಶಬಾಬು ಯಾಳಗಿ ಅವರನ್ನು ಮಂಗಳವಾರ ದೇವಾಂಗ ಸಮಾಜದ ಮಹಿಳಾ ಘಟಕದಿಂದ ಸನ್ಮಾನಿಸಲಾಯಿತು.

ರಾಜ್ಯಶಾಸ ಉಪನ್ಯಾಸಕರಾಗಿ 2 ದಶಕಗಳಿಂದ ಪಟ್ಟಣದ ಕಲ್ಮಠ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರರಾಗಿರುವ ಯಾಳಗಿ 20 ಹೆಚ್ಚು ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ್ದಾರೆ. ರಾಜ್ಯದ ವಿವಿಧ ವಿಷಯಗಳ ಕುರಿತು ಉಪನ್ಯಾಸ ನೀಡಿದ್ದಾರೆ.

ಶಿಕ್ಷಣ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿನ ಇವರ ಸಾಧನೆಗೆ ರಾಯಚೂರು ಜಿಲ್ಲಾಡಳಿತದಿಂದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ, ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ನೀಡುವ ಶಿಕ್ಷಣ ತಜ್ಞ ಎಚ್.ನರಸಿಂಹಯ್ಯ ರಾಜ್ಯ ಪ್ರಶಸ್ತಿ, ಡಾ.ಪಂ ಪುಟ್ಟರಾಜ ಗವಾಯಿಗಳವರ ಕನ್ನಡ ಸಾಹಿತ್ಯ ಸಿರಿ ಮುಂತಾದ ಹತ್ತು ಹಲವು ಪ್ರಶಸ್ತಿಗಳು ಲಭಿಸಿವೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವ ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಕಾವ್ಯ ವಾಚನ ಮಾಡಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಏರ್ಪಡಿಸಿದ್ದ ರಾಜ್ಯ ಮಟ್ಟದ ಎನ್ನೆಸ್ಸೆಸ್ ವಿಶೇಷ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದಾರೆ. ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷರಾಗಿ, ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವಿಶೇಷ ಜಿಲ್ಲಾ ಆಹ್ವಾನಿತರಾಗಿ, ಮಾನ್ವಿ ಕಲ್ಮಠದ ಸಾಮಾಜಿಕ, ಸಾಂಸ್ಕೃತಿಕ ಸೇವಾ ಪ್ರತಿಷ್ಠಾನದಲ್ಲಿ ಸಹ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net