

ಮೋರಟಗಿ: ಕೇವಲ ಮುಖಂಡರಿಂದಷ್ಟೇ ಪಕ್ಷ ಬೆಳೆಯಲು ಸಾಧ್ಯವಿಲ್ಲ. ಯುವಕರು ಬೂತ್‌ಮಟ್ಟದಲ್ಲಿ ಸಂಚರಿಸಿ ಪಕ್ಷದ ಸಾಧನೆಗಳನ್ನು ಸಾರ್ವಜನಿಕರಿಗೆ ತಿಳಿಸಿದಾಗ ಮಾತ್ರ ಪಕ್ಷ ಬೆಳೆಯಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಸದಸ್ಯತ್ವ ಮಾಡಿಸಬೇಕು ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.
ಗ್ರಾಮದಲ್ಲಿ ಬಿಜೆಪಿ ಸಂಘಟನಾ ಪರ್ವ ಮಹಾ ಸಂಪರ್ಕ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಧಾನಿ ಮೋದಿ ಅವರು ಜನಪರ ರೈತಪರ ಸೇರಿ ಹಲವಾರು ಹೊಸ ಹೊಸ ಯೋಜನೆಗಳನ್ನು ತರುವ ಮೂಲಕ ಬಲಿಷ್ಠ ದೇಶಗಳು ಭಾರತದತ್ತ ಮುಖಮಾಡಿ ನೋಡುವ ಹಾಗೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಬಿಜೆಪಿಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ತಾವೆಲ್ಲರೂ ಬೂತ್‌ಮಟ್ಟದಲ್ಲಿ ಸಂಚರಿಸಿ ಹೆಚ್ಚಿನ ಸಂಖ್ಯೆಯಲ್ಲಿ ನೂತನ ಸದಸ್ಯರನ್ನು ಮಾಡಿಸಬೇಕು ಎಂದು ಮನವಿ ಮಾಡಿದರು.
ಸಿಂದಗಿ ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಡಂಬಳ್, ತಾಪಂ ಮಾಜಿ ಸದಸ್ಯ ಮಡಿವಾಳಪ್ಪ ಬೋನಾಳ, ಜಿ.ಕೆ.ನೆಲ್ಲಗಿ, ಮಲ್ಲನಗೌಡ ಬಿರಾದಾರ, ನಿಂಗಣ್ಣ ಅಗಸರ, ಸಿದ್ದನಗೌಡ ಗುತ್ತರಗಿ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.