

ಕೆ.ಆರ್.ಪೇಟೆ: ತಾಲೂಕಿನ ಶೀಳನೆರೆ ಹೋಬಳಿಯ ಮುರುಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಮುರುಕನಹಳ್ಳಿ ರಮೇಶ್ ಹಾಗೂ ಉಪಾಧ್ಯಕ್ಷರಾಗಿ ಮೋದೂರು ನಂಜಪ್ಪಚಾರಿ ಆಯ್ಕೆಯಾಗಿದ್ದಾರೆ.
ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಮುರುಕನಹಳ್ಳಿ ರಮೇಶ್ ಹಾಗೂ ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಅಗಸರಹಳ್ಳಿ ಗೋವಿಂದರಾಜು ನಾಮಪತ್ರ ಸಲ್ಲಿಸಿದ್ದರು.
ಉಪಾಧ್ಯಕ್ಷರ ಸ್ಥಾನಕ್ಕೆ ಮೋದೂರು ನಂಜಪ್ಪಚಾರಿ ಹಾಗೂ ನಾಗಮ್ಮ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು.
ನಂತರ ನಡೆದ ಮತದಾನದಲ್ಲಿ ರಮೇಶ್, ನಂಜಪ್ಪಚಾರಿ ತಲಾ 7 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಗಸರಹಳ್ಳಿ ಗೋವಿಂದರಾಜು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ನಾಗಮ್ಮ ಕ್ರಮವಾಗಿ 6 ಮತಗಳನ್ನು ಪಡೆದು ಪರಾಭವಗೊಂಡರು.
ಚುನಾವಣಾ ಫಲಿತಾಂಶ ಘೋಷಣೆಯಾಗುತ್ತಿದ್ದಂತೆಯೇ ನೂತನ ಅಧ್ಯಕ್ಷರು ಉಪಾಧ್ಯಕ್ಷರನ್ನು ಸಂಘದ ವ್ಯಾಪ್ತಿಯ ಜೆಡಿಎಸ್, ಬಿಜೆಪಿ ಮುಖಂಡರು ಹಾಗೂ ಸಂಘದ ನಿರ್ದೇಶಕರು ಅಭಿಮಾನಿಗಳು ಅಭಿನಂದಿಸಿದರು.
ಸಂಘದ ನಿರ್ದೇಶಕರಾದ ಬಲರಾಂ, ನಾಗಮ್ಮ, ಸರಸ್ವತಿ, ನಂಜುಂಡಪ್ಪ, ರಾಜು, ಲಲಿತಮ್ಮ, ಮುಖಂಡರಾದ ಶಾಸಕರ ಸಹೋದರ ಎಚ್.ಟಿ.ಲೋಕೇಶ್, ನಂಜುಂಡಪ್ಪ(ಪುಟ್ಟಸ್ವಾಮಪ್ಪ), ನಿವೃತ್ತ ಬಿ.ಸಿ.ಎಂ.ಇಲಾಖೆಯ ಅಧಿಕಾರಿ ಮುರುಕನಹಳ್ಳಿ ಟಿ.ನಿಂಗಪ್ಪ, ಗ್ರಾಪಂ ಸದಸ್ಯ ಜಗದೀಶ್, ವಕೀಲರಾದ ಪ್ರಸನ್ನಕುಮಾರ್, ತಾಲೂಕು ಎಪಿಎಂಸಿ ಮಾಜಿ ಅಧ್ಯಕ್ಷ ನಾಗರಾಜೇಗೌಡ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಅಗಸರಹಳ್ಳಿ ದೇವರಾಜು, ಭೈರಾಪುರ ಹರೀಶ್ ಮತ್ತಿತರರು ಇದ್ದರು.