ಬೆಳಗಾವಿ ಇಂದು ರಮೇಶ್ ಜಾರಕಿಹೊಳಿ ಭೇಟಿ? 60ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ಬೆಂಬಲಿಗರು

jarakiholi
Published on

ಬೆಳಗಾವಿ: ಸಿಡಿ ಪ್ರಕರಣ ಬಯಲಿಗೆ ಬಂದ ಬಳಿಕ ಇದೇ ಮೊದಲ ಬಾರಿಗೆ ಗೋಕಾಕ್​ಗೆ ಆಗಮಿಸಿರುವ ಮಾಜಿ ಸಚಿವ ರಮೇಶ್​ ಜಾರಕಿಹೊಳಿ, ಇಂದು ಬೆಳಗಾವಿ ಲೋಕಸಭೆ ಉಪ ಚುನಾವಣೆ ಅಖಾಡಕ್ಕೂ ಎಂಟ್ರಿ ಕೊಡಲಿದ್ದಾರೆ ಎಂದು ಮೂಲಗಳು ತಿಳಿವೆ.

ಈಗಾಗಲೇ 60ಕ್ಕೂ ಹೆಚ್ಚು ವಾಹನಗಳಲ್ಲಿ ಬೆಂಬಲಿಗರು ಬೆಳಗಾವಿಯಲ್ಲಿ ಬೀಡುಬಿಟ್ಟಿದ್ದಾರೆ. ರಮೇಶ್​ ಜಾರಕಿಹೊಳಿ ಬರುತ್ತಿದ್ದಂತೆ ಅವರಿಗೆ ಸಾಥ್​ ನೀಡಲಿದ್ದಾರೆ. ಹೌದು, ಬೆಳಗಾವಿ ಲೋಕಸಭೆ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ದಿ. ಸುರೇಶ್ ಅಂಗಡಿ ಪತ್ನಿ ಮಂಗಲ ಅಂಗಡಿ ಇಂದು ನಾಮಪತ್ರ ಸಲ್ಲಿಸಲಿದ್ದು, ಬಿಜೆಪಿ ನಾಯಕರ ಸಲಹೆಯಂತೆ ಇಂದು ಬಹಿರಂಗ ಸಭೆ ಹಾಗೂ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ರಮೇಶ್​ ಜಾರಕಿಹೊಳಿ ಪಾಲ್ಗೊಳ್ಳುತ್ತಾರೆ ಎನ್ನಲಾಗಿದೆ. ಇದನ್ನೂ ಓದಿರಿ 

ಇತ್ತ ಸಿಡಿ ಲೇಡಿ ಇಂದು ಕೋರ್ಟ್​ಗೆ ಹಾಜರಾಗುವ ಸಾಧ್ಯತೆ ಇರುವ ಕಾರಣ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಬಾಲಚಂದ್ರ ಜಾರಕಿಹೊಳಿ ಗೈರಾಗಲಿದ್ದಾರೆ. ರಾಜ್ಯ ಬಿಜೆಪಿ ಘಟಕದಿಂದ ಉಪಸ್ಥಿತಿ ಇರುವಂತೆ ಬಾಲಚಂದ್ರಗೆ ಸೂಚನೆ ಇದ್ದರೂ ವೈಯಕ್ತಿಕ ಕಾರಣ ಹೇಳಿ ಬೆಂಗಳೂರಿನಲ್ಲಿಯೇ ಉಳಿದುಕೊಂಡಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸಿಕೊಂಡು ಬರುವ ಕೆಲಸ ಮಾಡ್ತೀವಿ. ಆದ್ರೆ ಈಗ ವೈಯಕ್ತಿಕ ಕಾರಣಗಳ ಹಿನ್ನೆಲೆ ಬರಲು ಆಗ್ತಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ರಮೇಶ್​ ಜಾರಕಿಹೊಳಿ ಸಹೋದರ ಸತೀಶ್​ ಜಾರಕಿಹೊಳಿ ಬೆಳಗಾವಿ ಲೋಕಸಭೆ ಉಪ ಚುನಾವಣೆಯ ಕಾಂಗ್ರೆಸ್​ ಅಭ್ಯರ್ಥಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net