ನನ್ಗೆ ಸುಳ್ಳು ಹೇಳುವ ಚಟವಿಲ್ಲ, ನನ್ನ ಜತೆ ಎಚ್​ಡಿಕೆ ಫೋನ್​ ಸಂಪರ್ಕದಲ್ಲಿದ್ದಾರೆ… ಎನ್ನುತ್ತಲೇ ಅಂತೆ-ಕಂತೆಗೆ ತೆರೆ ಎಳೆದ ರಮೇಶ್ ಜಾರಕಿಹೊಳಿ​

Ramesh Jarakiholi vvani
Ramesh Jarakiholi
Published on

ಬೆಳಗಾವಿ: ಸಿಡಿ ಕೇಸ್​ನಲ್ಲಿ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡ ರಮೇಶ್ ಜಾರಕಿಹೊಳಿಗೆ, ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಇನ್ನೂ ಅವಕಾಶ ಸಿಕ್ಕಿಲ್ಲ. ಇದರಿಂದ ಬೇಸರಗೊಂಡಿರುವ ರಮೇಶ್​ ಜಾರಕಿಹೊಳಿ ಅವರ ಮುಂದಿನ ನಡೆ ಕುರಿತು ಅಂತೆ-ಕಂತೆ ಹರಿದಾಡುತ್ತಿದೆ. ಆದರೆ ಈ ಕುರಿತು ಸ್ವತಃ ಜಾರಕಿಹೊಳಿ ಅವರೇ ಪ್ರತಿಕ್ರಿಯಿಸಿದ್ದು, ನನಗೆ ಸುಳ್ಳು ಹೇಳುವ ಚಟವಿಲ್ಲ ಎಂದಿದ್ದಾರೆ.

ಬೆಳಗಾವಿ ತಾಲೂಕಿನ ಬೆಳಗುಂದಿಯಲ್ಲಿ ಶನಿವಾರ ಮಾತನಾಡಿದ ರಮೇಶ್​ ಜಾರಕಿಹೊಳಿ, ನನ್ನ ಮನಸ್ಸಿಗೆ ಬೇಸರವಾಗಿರುವುದರಿಂದ ಕಳೆದೊಂದು ವರ್ಷದಿಂದ ಮಾಧ್ಯಮದವರಿಂದ ದೂರ ಇದ್ದೆ. ಆದರೆ, ಅನಿವಾರ್ಯವಾಗಿ ಈಗ ವಿಷಯ ಸ್ಪಷ್ಟಪಡಿಸುತ್ತಿದ್ದೇನೆ. ನನಗೆ ಸುಳ್ಳು ಹೇಳುವ ಚಟವಿಲ್ಲ. ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ನನ್ನ ಜತೆ ಫೋನ್​ ಸಂಪರ್ಕದಲ್ಲಿದ್ದಾರೆ. ಆದರೆ, ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದರು.

2023ಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ಆ ಸಂದರ್ಭದಲ್ಲಿ ಪಕ್ಷದ ಹತ್ತು ಪ್ರಮುಖರಲ್ಲಿ ನಾನು ಒಬ್ಬ ಆಗುತ್ತೇನೆ. ಉನ್ನತ ಹುದ್ದೆಗೆ ಹೋಗಿ ಸೇವೆ ಮಾಡುತ್ತೇನೆ. 2023ರ ವಿಧಾನಸಭೆ, 2024ರ ಲೋಕಸಭೆ ಚುನಾವಣೆಯಲ್ಲೂ ಪಕ್ಷದ ಪ್ರಮುಖ ಮುಖಂಡನಾಗಿ ಕೆಲಸ ಮಾಡುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net