ರಮೇಶ ಜಾರಕಿಹೊಳಿ ರಾಜೀನಾಮೆ ಅಗತ್ಯವಿಲ್ಲ, ಪಕ್ಷದಿಂದ ತೊಂದರೆಯಾಗಿಲ್ಲ ಎಂದ ಮಾಧುಸ್ವಾಮಿ

Madhuswmyy (1)
Published on

ಉಡುಪಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸರ್ಕಾರ ಮತ್ತು ಪಕ್ಷದ ಕಡೆಯಿಂದ ಏನು ತೊಂದರೆಯಾಗಿಲ್ಲ. ಆಕಸ್ಮಿಕವಾದ ಘಟನೆಗೆ ಅವರು ಬಲಿಯಾಗಿದ್ದಾರೆ. ನಾವೆಲ್ಲ ಅವರ ಬಗ್ಗೆ ಅನುಕಂಪ ಇಟ್ಟುಕೊಂಡಿದ್ದೇವೆ. ಇದು ಕಾನೂನಾತ್ಮಕ ಮತ್ತು ನೈತಿಕ ವಿಚಾರ. ನೈತಿಕವಾಗಿ ಹೊಣೆ ಹೊತ್ತು ಅವರು ರಾಜೀನಾಮೆ ನೀಡಿದ್ದಾರೆ. ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧ ಅಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆ ಹೆಣ್ಣುಮಗಳ ವರ್ತನೆ ನೋಡಿದರೆ ಇಚ್ಛೆಪಟ್ಟು ಹೋಗಿದ್ದಾರೆ ಅನ್ನೋ ಭಾವನೆ ಬರುತ್ತದೆ. ಹಾಗಾಗಿ ಜಾರಕಿಹೊಳಿಗೆ ಶಿಕ್ಷೆ ಆಗಲಾರದು. ಕೋರ್ಟ್‌ನಲ್ಲಿ ಕೇಸ್ ಇರುವಾಗ ಎಲ್ಲವನ್ನು ಎದುರಿಸಲೇಬೇಕು, ಯಾರನ್ನೂ ದೂರಲು ಸಾಧ್ಯವಿಲ್ಲ. ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿಲ್ಲ ಎಂದು ಸಚಿವ ಮಾಧು ಸ್ವಾಮಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net