

ವಿಜಯಪುರ: ಸಂಸದರೊಬ್ಬರು ತಮ್ಮ ಕನಸಿನ ಮನೆಗೆ ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ನಾಮಕರಣ ಮಾಡಿದ್ದಾರೆ. ಆ ಮೂಲಕ ತನ್ನ ನೆಚ್ಚಿನ ನಾಯಕರ ಕುರಿತು ಅಭಿಮಾನ ಮೆರೆದಿದ್ದಾರೆ.
ನಗರ ಹೊರವಲಯದಲ್ಲಿ ಬಿಜೆಪಿ ಸಂಸದ, ಕೇಂದ್ರದ ಮಾಜಿ ಸಚಿವ ರಮೇಶ್ ಜಿಗಜಿಣಗಿ ಅವರು ನೂತನ ಮನೆ ನಿರ್ಮಿಸಿದ್ದಾರೆ. ಈ ನಿವಾಸಕ್ಕೆ ದಿ. ರಾಮಕೃಷ್ಣ ಹೆಗಡೆ ಮತ್ತು ಜೆ.ಎಚ್.ಪಟೇಲ್ ಅವರ ಹೆಸರನ್ನೇ ಇಟ್ಟಿದ್ದಾರೆ. ಇದನ್ನೂ ಓದಿರಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬರಹ; ಕಾಂಗ್ರೆಸ್ ಮುಖಂಡ ಅರೆಸ್ಟ್
ಗೃಹ, ಕಂದಾಯ, ಅಬಕಾರಿ, ಸಮಾಜ ಕಲ್ಯಾಣ ಸೇರಿದಂತೆ ನಾನಾ ಇಲಾಖೆಯ ಸಚಿವರಾಗಿದ್ದ ರಮೇಶ ಜಿಗಜಿಣಗಿ, ಇದೀಗ ವಿನೂತ ಹೆಜ್ಜೆ ಇಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.