

ಕೊಂಡ್ಲಹಳ್ಳಿ: ಉತ್ತಮ ಮಾರ್ಗದರ್ಶನ ನೀಡುವ ಮೂಲಕ ಮಕ್ಕಳ ಸಾಧನೆಗೆ ಪಾಲಕರು ಬೆನ್ನೆಲುಬಾಗಿ ನಿಲ್ಲಬೇಕು ಎಂದು ಬೀರಲಿಂಗೇಶ್ವರ ವಿದ್ಯಾಸಂಸ್ಥೆ ಖಜಾಂಚಿ ಆರ್. ರಾಮರೆಡ್ಡಿ ತಿಳಿಸಿದರು.
ಇಲ್ಲಿನ ಬೀರಲಿಂಗೇಶ್ವರ ವಿದ್ಯಾಸಂಸ್ಥೆಯ ಸರ್ವೋದಯ ನ್ಯಾಷನಲ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.
ಮೊಬೈಲ್ ಗೀಳಿನಿಂದ ಮಕ್ಕಳನ್ನು ಹೊರಗೆ ತರಬೇಕು. ಅವರಲ್ಲಿರುವ ಕೌಶಲ ಗುರುತಿಸಿ ಉತ್ತೇಜನ ನೀಡಬೇಕು ಎಂದು ತಿಳಿಸಿದರು.
ಸಂಸ್ಥೆ ಅಧ್ಯಕ್ಷ ಕೆ.ಟಿ. ಕೇಶವರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಿ. ಷಡಕ್ಷರಪ್ಪ, ನಿರ್ದೇಶಕರಾದ ಬಿ.ಎಸ್. ಬಸವರಾಜಪ್ಪ, ಕೆ.ಟಿ. ಹನುಮಂತರೆಡ್ಡಿ, ಮುಖ್ಯಶಿಕ್ಷಕ ಬಿ.ಟಿ. ನಾಗಭೂಷಣ್, ಪಾಲಕರಾದ ಮೋಹನ್, ಬಸವನಗೌಡ, ಹಸೀನಾ ಪಟೇಲ್ ಇತರರಿದ್ದರು.
ಕಳೆದ ವರ್ಷ ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಹಾಗೂ ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.