ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಮು ನಾಯ್ಕ ರಾಜೀನಾಮೆ

25 YLP 01
Published on

ವಿಜಯವಾಣಿ ಸುದ್ದಿಜಾಲ ಯಲ್ಲಾಪುರ

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಅವರ ಮಾಧ್ಯಮ ಸಲಹೆಗಾರ, ಬಿಜೆಪಿ ಹಿರಿಯ ಮುಖಂಡ ರಾಮು ನಾಯ್ಕ ಗುರುವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 45 ವರ್ಷಗಳ ಹಿಂದೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೂಲಕ ಸಾರ್ವಜನಿಕ, ರಾಜಕೀಯ ಜೀವನ ಆರಂಭಿಸಿದ ಈ ದಿನವೇ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದಾಗ ಬಂಧನಕ್ಕೊಳಗಾಗಿ ಜನಸಂಘದ ಪ್ರಮುಖರ ಒಡನಾಟದೊಂದಿಗೆ ಜನಸಂಘದ ಮೂಲಕ ರಾಜಕೀಯ ಪ್ರವೇಶಿಸಿದ್ದು, ನಂತರ ಬಿಜೆಪಿ ಸ್ಥಾಪನೆಯಾದಾಗ ಅಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೆ. ಅದಕ್ಕೆ ಪಕ್ಷದ ಹಿರಿಯರ ಸಹಕಾರ, ಮಾರ್ಗದರ್ಶನ ದೊರೆತಿದೆ. ಈವರೆಗೆ ಪಕ್ಷ ನೀಡಿದ ಎಲ್ಲ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷಾತೀತವಾಗಿ ಸಾರ್ವಜನಿಕ ಕೆಲಸ, ಸೇವೆ ಕೈಗೊಳ್ಳಬೇಕೆಂಬ ಉದ್ದೇಶ ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net