

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ( Sm Krishna ) (92) ಇಂದು ವಿಧಿವಶರಾಗಿದ್ದಾರೆ.ಸ್ಯಾಂಡಲ್ವುಡ್ ನಟಿ ರಮ್ಯಾ (Ramya) ಅವರು ಸದಾಶಿವನಗರ ಆಗಮಿಸಿ ಎಸ್‌ಎಂ ಕೃಷ್ಣ (SM Krishna) ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗ ನಾನು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿ ತೆರಳಿದ್ದಾರೆ.
ಎಸ್.ಎಂ.ಕೃಷ್ಣ ಅವರ ನೇತೃತ್ವದಲ್ಲೇ ರಾಜಕಾರಣಕ್ಕೆ ಕಾಲಿಟ್ಟ ರಮ್ಯಾ ಅವರು ಕಾಂಗ್ರೆಸ್ ಪಕ್ಷದಲ್ಲಿ ಅತ್ಯಂತ ಶೀಘ್ರವಾಗಿ ಬೆಳೆದರು. ತಮ್ಮ ಸೆಲೆಬ್ರಿಟಿ ಇಮೇಜ್‌ನಿಂದಾಗಿ ಹೈಕಮಾಂಡ್‌ನಲ್ಲಿ ಶೀಘ್ರವಾಗಿ ಗುರುತಿಸಿಕೊಂಡಿದ್ದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್. ಎಂ. ಕೃಷ್ಣ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.