

ಬೆಳಗಾವಿ: ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಆದೇಶ ಹೊರಡಿಸಿದ್ದಾರೆ.
ಕಳೆದ ಒಂದು ವಾರದಿಂದ ಧಾರಕಾವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಜು.19 ಮತ್ತು 20ರಂದು ಎರಡು ದಿನಗಳ ಕಾಲ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಕೆಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.