ಕೇಂದ್ರದಿಂದ ಸಿಕ್ಕಿದ್ದು ಚಂಬು ಮಾತ್ರ

Randeep Surjewala
Published on

ತುಮಕೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಸಿಕ್ಕಿದ್ದು ಕೇವಲ ಚಂಬು ಮಾತ್ರ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಲೇವಡಿ ಮಾಡಿದರು.

ನಗರದಲ್ಲಿ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಶುಕ್ರವಾರ 8 ಕ್ಷೇತ್ರದ ಹಾಲಿ, ಮಾಜಿ ಶಾಸಕರ, ಮುಖಂಡರ ಸಭೆ ನಡೆಸಿ ಗೆಲುವಿನ ಕುರಿತು ಚುನಾವಣಾ ತಂತ್ರಗಾರಿಕೆ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ‘ಗ್ಯಾರಂಟಿ’ ಮಾಡೆಲ್ ರಾಷ್ಟ್ರಕ್ಕೆ ಮಾದರಿಯಾಗಿದೆ. ನಮ್ಮ ಸರ್ಕಾರದಿಂದ ಕೊಟ್ಟ ಗ್ಯಾರಂಟಿಯಿಂದ ಲಕ್ಷಾಂತರ ಕುಟುಂಬಕ್ಕೆ ಅನುಕೂಲವಾಗಿಗಿದೆ. ಗೃಹ ಲಕ್ಷ್ಮಿ ಮಹಾಲಕ್ಷ್ಮಿ ಸೇರಿ 10 ಸಾವಿರ ರೂ., ಕೊಡುವ ಗ್ಯಾರಂಟಿಯನ್ನು ಈ ಬಾರಿ ನೀಡಿದ್ದು ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net