ಬೈಕ್‌ನಿಂದ ಬಿದ್ದು ಸವಾರ ಸಾವು

Bike Accident_2
Published on

ರಾಣೆಬೆನ್ನೂರ: ಬೈಕ್‌ನಿಂದ ಬಿದ್ದು ಸವಾರ ಮೃತಪಟ್ಟ ಘಟನೆ ತಾಲೂಕಿನ ಮಹಿಕೋ ಕಂಪನಿ ಹತ್ತಿರ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಶುಕ್ರವಾರ ನಡೆದಿದೆ.
ತಾಲೂಕಿನ ಗುಡಗೂರ ಗ್ರಾಮದ ಬಸವರಾಜ ಗುಡ್ಡಪ್ಪ ಗಂಗಾಪುರ (32) ಮೃತ ಬೈಕ್ ಸವಾರ.
ಈತ ರಾಣೆಬೆನ್ನೂರಿನಿಂದ ಹರಿಹರ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಬಸವರಾಜನನ್ನು ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net