ಮುಖ್ಯಮಂತ್ರಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮಾ. 29ರಂದು

TSV_8983
Published on

ರಾಣೆಬೆನ್ನೂರ: ತಾಲೂಕಿನಲ್ಲಿ 589.50 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾ. 29ರಂದು ಮಧ್ಯಾಹ್ನ 1.30 ಗಂಟೆಗೆ ತಾಲೂಕಿನ ಹೂಲಿಹಳ್ಳಿ ಬಳಿಯ ಎಪಿಎಂಸಿ ಮೆಗಾ ಮಾರುಕಟ್ಟೆ ಆವರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಅರುಣಕುಮಾರ ಪೂಜಾರ ತಿಳಿಸಿದ್ದಾರೆ.
ಇಲ್ಲಿಯ ಶ್ರೀರಾಮ ನಗರದ ಸಾಯಿಬಾಬಾ ದೇವಸ್ಥಾನದ ಬಳಿ 12 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆಯ ನಿರ್ಮಾಣ, ನೀರಾವರಿ ಇಲಾಖೆಯ ವತಿಯಿಂದ 206 ಕೋಟಿ ರೂ. ವೆಚ್ಚದಲ್ಲಿ ತಾಲೂಕಿನ ವಿವಿಧ 21ಕೆರೆಗಳ ನೀರು ತುಂಬಿಸುವ ಯೋಜನೆ, 130 ಕೋಟಿ ರೂ. ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗಳ ಉದ್ಘಾಟನೆ, ಹೂಲಿಹಳ್ಳಿ ಬಳಿ ನಿರ್ಮಾಣವಾಗಿರುವ ಮೆಗಾ ಮಾರುಕಟ್ಟೆ ಉದ್ಘಾಟನೆ, 50 ಕೋಟಿ ರೂ. ವೆಚ್ಚದಲ್ಲಿ ಜವಳಿ ಪಾರ್ಕ್ ನಿರ್ಮಾಣ ಕಾಮಗಾರಿ, 45 ಕೋಟಿ ರೂ. ವೆಚ್ಚದಲ್ಲಿ ನಗರೋತ್ತಾನ ಯೋಜನೆಯ ವಿವಿಧ ಕಾಮಗಾರಿ, ಹಿಲದಹಳ್ಳಿ-ಬೇಲೂರು ಬಳಿ 6.52 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ 110 ಕೆವಿ ವಿದ್ಯುತ್ ವಿತರಣೆ ಕೇಂದ್ರ ಘಟಕಕ್ಕೆ ಚಾಲನೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net