ಪಕ್ಷದ ವಿರುದ್ಧ ಅಪಪ್ರಚಾರ: ಜಟ್ಟೆಪ್ಪ ಕರೇಗೌಡ್ರ ಸೇರಿ ಇಬ್ಬರ ಉಚ್ಛಾಟನೆ

20-RNR-08 jatteppa
Published on

ರಾಣೆಬೆನ್ನೂರ: ಇಲ್ಲಿಯ ಎಪಿಎಂಸಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಜಟ್ಟೆಪ್ಪ ಕರೇಗೌಡ್ರ ಹಾಗೂ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ವಿಶ್ವನಾಥ ಕರೇಗೌಡ್ರ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಕಾರಣದಿಂದ ಪಕ್ಷದಿಂದ ಉಚ್ಛಾಟನೆ ಮಾಡಿ ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್ ಆದೇಶಿಸಿದ್ದಾರೆ.
ಅವರ ಪ್ರಾಥಮಿಕ ಸದಸ್ಯತ್ವ ರದ್ದು ಮಾಡಲಾಗಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಅಪ್ರಚಾರ ಮಾಡಿದ ಹಿನ್ನಲೆಯಲ್ಲಿ 6 ವರ್ಷ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net