ವೇದಾಂತ ಪರಿಷತ್ ಧರ್ಮಸಭೆ 24ರಂದು

Published on

ರಾಣೆಬೆನ್ನೂರ: ತಾಲೂಕಿನ ಖಂಡೇರಾಯನಹಳ್ಳಿಯ ಸಿದ್ಧಾರೂಢ ಮಠದಲ್ಲಿ ಸದ್ಗುರು ಸಿದ್ಧಾರೂಢ ಸ್ವಾಮಿ ಜಯಂತಿ ನಿಮಿತ್ತ 26ನೇ ವೇದಾಂತ ಪರಿಷತ್, ಧರ್ಮಸಭೆ ಹಾಗೂ ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭ ಮೇ 24ರಂದು ಬೆಳಗ್ಗೆ 10.30ಕ್ಕೆ ಜರುಗಲಿದೆ.
ಇಂಚಲ ಶಿವಯೋಗಿಶ್ವರ ಸಾಧು ಸಂಸ್ಥಾನಮಠದ ಡಾ. ಶಿವಾನಂದ ಭಾರತಿ ಸ್ವಾಮೀಜಿ, ಐರಣಿ ಹೊಳೆಮಠದ ಬಸವರಾಜ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಾರೂಢ ಮಠದ ಪೀಠಾಧಿಪತಿ ನಾಗರಾಜಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಹಂಪಿ ಹೇಮಕೂಟದ ವಿದ್ಯಾನಂದ ಭಾರತಿ ಸ್ವಾಮೀಜಿ ನೇತೃತ್ವ ವಹಿಸುವರು. ಚಳಗೇರಿ ಕಟಗಿಹಳ್ಳಿಮಠದ ಡಾ. ಮಹಾಂತೇಶ್ವರ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು.
ದಾವಣಗೆರೆ ಜಡೆಸಿದ್ದೇಶ್ವರ ಮಠದ ಶಿವಾನಂದ ಸ್ವಾಮೀಜಿ, ಇಂಚಲದ ಪ್ರರ್ಣಾನಂದ ಭಾರತಿ ಸ್ವಾಮೀಜಿ, ಹದಡಿಯ ಚಂದ್ರಗಿರಿ ಮಠದ ಮುರಳೀಧರ ಸ್ವಾಮೀಜಿ, ನಗರದ ವಿರಕ್ತಮಠದ ಗುರುಬಸವ ಸ್ವಾಮೀಜಿ, ಮಣಕೂರ ಸಿದ್ಧಾರೂಢ ಗುರುದೇವಾಶ್ರಮದ ಮಾತಾಜಿ ಚನ್ನಬಸಮ್ಮನವರು, ಗೋಕಾಕ ತಾಲೂಕು ಹಡಗಿನಾಳದ ಸುಜ್ಞಾನ ಕುಟೀರದ ಮಲ್ಲೇಶ್ವರ ಶರಣರು ಉಪದೇಶಾಮೃತ ನೀಡುವರು.
ಶಾಸಕರಾದ ರುದ್ರಪ್ಪ ಲಮಾಣಿ, ಪ್ರಕಾಶ ಕೋಳಿವಾಡ, ಬಿ.ಪಿ. ಹರೀಶ, ಮಾಜಿ ಶಾಸಕರಾದ ಅರುಣಕುಮಾರ ಪೂಜಾರ, ಎಚ್.ಎಸ್. ಶಿವಶಂಕರ, ಗ್ರಾಪಂ ಅಧ್ಯಕ್ಷೆ ನೀಲಮ್ಮ ಪೂಜಾರ, ಉಪಾಧ್ಯಕ್ಷೆ ಲಲಿತಾ ಹಿರೇಬಿದರಿ ಮತ್ತಿತರರು ಪಾಲ್ಗೊಳ್ಳುವರು ಎಂದು ಮಠದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net